ಕರಾವಳಿ ಜಿಲ್ಲೆಗಳಲ್ಲಿ ಮಾ. 20, 21ರಂದು ರಾಹುಲ್ ಪ್ರವಾಸ
ಬೆಂಗಳೂರು, ಮಾರ್ಚ್ 7: ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಗಳ ನಂತರ ಇದೀಗ ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 20 ಮತ್ತು 21ರಂದು ಅವರು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದಾರೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಮಂಗಳವಾರ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ದಿಲ್ಲಿಯಲ್ಲಿ ರಾಹುಲ್ ಗಾಂಧಿ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರವಾಸವನ್ನು ಅಂತಿಮಗೊಳಿಸಲಾಗಿದೆ.
ಮಾರ್ಚ್ 20 ಮತ್ತು 21ರಂದು ಅವರು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರು ಪ್ರಚಾರ ನಡೆಸಲಿದ್ದಾರೆ.

ಭೇಟಿ ವೇಳೆ ಉತ್ತರ ಕರ್ನಾಟಕದಲ್ಲಿ ತಾವು ನಡೆಸಿದ ಯಾತ್ರೆಯ ಪರಿಣಾಮಗಳ ಬಗ್ಗೆ ರಾಹುಲ್ ಗಾಂಧಿ ವರದಿ ಕೇಳಿದ್ದಾರೆ. ಮತ್ತು ಕರಾವಳಿ ಭಾಗದಲ್ಲಿ ಬಿಜೆಪಿ ಪ್ರಭಾವ ಹೆಚ್ಚದಂತೆ ಎಚ್ಚರ ವಹಿಸಿ ಎಂದೂ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications