Siddaramaiah: ಬೆಳಗಾವಿ ಗಾಂಧಿ ಸಮಾವೇಶಕ್ಕೆ ರಾಹುಲ್ ಗಾಂಧಿ ಗೈರು: ಕಾರಣ ತಿಳಿಸಿದ ಸಿದ್ದರಾಮಯ್ಯ

ಬೆಳಗಾವಿ, ಜನವರಿ 21: ರಾಹುಲ್ ಗಾಂಧಿ ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

Rahul is absent due to illness says Siddaramaiah

ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು. ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ. ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು. ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+