ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡಕ್ಕೆ ಐಐಟಿ, ಗುರುವಾರ ರಾಯಚೂರು ಬಂದ್

|
Google Oneindia Kannada News

ರಾಯಚೂರು, ಸೆಪ್ಟೆಂಬರ್, 09 : ಧಾರವಾಡದಲ್ಲಿ ಐಐಟಿ ಸ್ಥಾಪನೆ ಮಾಡಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಒಪ್ಪಿಗೆ ನೀಡಿದೆ ಎಂಬ ಸುದ್ದಿ ತಿಳಿದ ರಾಯಚೂರಿನ ಜನರು ಪ್ರತಿಭಟನೆ ಆರಂಭಿಸಿದ್ದಾರೆ. ಸೆ.10ರಂದು ವಿವಿಧ ಸಂಘಟನೆಗಳು ರಾಯಚೂರು ಬಂದ್‌ಗೆ ಕರೆ ನೀಡಿವೆ.

ಧಾರವಾಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯನ್ನು ಧಾರವಾಡದಲ್ಲಿ ಸ್ಥಾಪನೆ ಮಾಡಲು ಕೇಂದ್ರ ಸಚಿವ ಸ್ಮೃತಿ ಇರಾನಿ ಒಪ್ಪಿಗೆ ನೀಡಿದ್ದಾರೆ ಎಂದು ಮಂಗಳವಾರ ರಾತ್ರಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. [ರಾಯಚೂರಿಗೆ ಐಐಟಿ ಬೇಕೆಂದ್ರು ಖರ್ಗೆ]

iit

ಧಾರವಾಡದಲ್ಲಿ ಐಐಟಿ ಸ್ಥಾಪನೆಯಾಗಲಿದೆ ಎಂಬ ಸುದ್ದಿ ತಿಳಿದ ರಾಯಚೂರಿನ ಜನರು ಪ್ರತಿಭಟನೆ ಆರಂಭಿಸಿದ್ದಾರೆ. ರಾತ್ರಿಯೇ ನಗರದ ಬಸ್ ನಿಲ್ದಾಣದ ಮುಂಭಾಗ ಟೈರ್‌ಗಳಿಗೆ ಬೆಂಕಿ ಹಚ್ಚಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. [ರಾಯಚೂರಲ್ಲಿ ಐಐಟಿ ಸ್ಥಾಪಿಸಲು ಸಂಸದರ ಮನವಿ]

ರಾಯಚೂರನ್ನು ಕಡೆಗಣಿಸಲಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ ಅನಂತ್ ಕುಮಾರ್ ಅವರು ರಾಯಚೂರನ್ನು ಕಡೆಗಣಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಘೋಷಣೆ ಕೂಗಿದ್ದಾರೆ.[ಧಾರವಾಡದಲ್ಲಿ ಸ್ಥಾಪನೆಯಾಗಲಿದೆ ಐಐಟಿ]

ಐಐಟಿ ರಾಯಚೂರಿನ ಕೈತಪ್ಪಿರುವ ಹಿನ್ನಲೆಯಲ್ಲಿ ಸೆ.10ರ ಗುರುವಾರ ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ. ಶಾಲಾ-ಕಾಲೇಜು, ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿವೆ. ಆರ್‌ಟಿಪಿಎಸ್ ಘಟಕಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ ಹುಬ್ಬಳ್ಳಿ-ಧಾರವಾಡ, ರಾಯಚೂರು, ಮೈಸೂರು ಜಿಲ್ಲೆಗಳಲ್ಲಿ ಐಐಟಿ ಸ್ಥಾಪನೆ ಮಾಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿ ಆರ್‌. ಸುಬ್ರಮಣ್ಯಂ ನೇತೃತ್ವದ ಸಮಿತಿ ಧಾರವಾಡದಲ್ಲಿ ಐಐಟಿ ಸ್ಥಾಪಿಸುವಂತೆ ಶಿಫಾರಸು ಮಾಡಿತ್ತು. ಇದಕ್ಕೆ ಸಚಿವಾಲಯ ಒಪ್ಪಿಗೆ ಕೊಟ್ಟಿದೆ.

English summary
Indian Institute of Technology (IIT) will established in Dharwad. Raichur IIT horata samiti and different organizations demanded for setting up the IIT in Raichur and called for Raichur bandh on September 10, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X