ರಾಯಚೂರುː ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Posted By:
Subscribe to Oneindia Kannada

ರಾಯಚೂರು, ಆಗಸ್ಟ್ 01: ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

22 ವರ್ಷ ವಯಸ್ಸಿನ ನವೀನ್ ಅವರು ಲಕ್ಷ್ಮಣ ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನವೀನ್ ಈ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದು ತಿಳಿದು ಬಂದಿಲ್ಲ.

Raichur Navodaya Medical College Student commits suicide

ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ನಪಾಸಾಗಿದ್ದರಿಂದ ಬೇಜಾರಾಗಿದ್ದ, ಮಾನಸಿಕ ಖಿನ್ನತೆಗೆ ಒಳಗಾಗಿದ್ದ, ತನ್ನ ತಾಯಿಯನ್ನು ನೋಡಬಯಸಿದ್ದ.
Raichur :A computer operator kicks woman in Corporation office | Oneindia kannada

ಅದರಂತೆ, ನವೀನ್ ಅವರ ತಾಯಿ, ಬೆಂಗಳೂರಿನಿಂದ ರಾಯಚೂರಿಗೆ ಬಂದಿದ್ದಾರೆ. ಆದರೆ, ಅಷ್ಟರಲ್ಲಿ ನವೀನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ನೇತಾಜಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿಯ ರೋದನ ಮುಗಿಲು ಮುಟ್ಟಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Raichur ː Navodaya Medical College student Naveen (22) a native of Bengaluru has committed suicide in the Lakshmana Layout.
Please Wait while comments are loading...