ರಾಯಚೂರಿನಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನ

ಹಾಸನ, ಫೆ.3 : ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಕ್ಷರ ಜಾತ್ರೆಗೆ ಇಂದು ತೆರೆ ಬೀಳಲಿದೆ. 82ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದಲ್ಲಿ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸೋಮವಾರ ಶ್ರವಣಬೆಳಗೊಳದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧವಾಗಿ ರಾಯಚೂರಿನಲ್ಲಿ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಬಾರಿ ಹಾವೇರಿ­ಯಲ್ಲಿ ಎದುರಾದಂತಹ ಸಮಸ್ಯೆ ಬರಬಾರದು ಎಂಬ ಕಾರಣಕ್ಕೆ ರಾಯಚೂರು ನಗರದಲ್ಲೇ ನಡೆಸ­ಬೇಕು ಎಂಬ ನಿರ್ಣಯ ಅಂಗೀಕರಿಸ­ಲಾಗಿದೆ. [ಸಾಹಿತ್ಯ ಸಮ್ಮೇಳನದ ಚಿತ್ರಗಳು]

kannada

ಸಮ್ಮೇಳನ ನಡೆಸುವುದಾಗಿ ರಾಮನಗರ, ಚಾಮ­ರಾಜ­ನಗರ ಮತ್ತು ಧಾರವಾಡ ಜಿಲ್ಲಾ ಘಟಕದವರು ಬೇಡಿಕೆ ಇಟ್ಟಿದ್ದರು. ಹೈದರಾಬಾದ್‌ ಕರ್ನಾಟ­ಕಕ್ಕೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ರಾಯ­­ಚೂರು ಜಿಲ್ಲೆಯನ್ನು ಆಯ್ಕೆ ಮಾಡಲಾಗಿದ್ದು, ಅಕ್ಟೋಬರ್‌ ತಿಂಗಳಿನಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಾನಾಂತರ ವೇದಿಕೆ­ಯನ್ನೇ ರದ್ದು ಮಾಡ­ಬೇಕು ಎಂದು ಕೆಲವರು ಒತ್ತಾಯಿಸಿದರು. ಈ ಬಗ್ಗೆ ಗಂಭೀರವಾದ ಚರ್ಚೆಗಳು ನಡೆದರೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ. ಈ ಬಗ್ಗೆ ಇನ್ನೊಮ್ಮೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳೋಣ ಎಂದು ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ತಿಳಿಸಿದರು. [ಸಮ್ಮೇಳನಾಧ್ಯಕ್ಷ ಸಿದ್ದಲಿಂಗಯ್ಯ ಭಾಷಣ ಓದಿ]

ಅರ್ಧ ದಿನದ ವೇತನ ವಾಪಸ್ : ಶ್ರವಣಬೆಳಗೊಳದ 81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾಸನ ಜಿಲ್ಲೆಯ ಸರ್ಕಾರಿ ನೌಕರರಿಂದ ಸಂಗ್ರಹಿಸಿರುವ ಒಂದು ದಿನದ ವೇತನದ ಪೂರ್ತಿ ಹಣವನ್ನು ಸಮ್ಮೇಳನಕ್ಕೆ ಕೊಡ­ಬೇಕು, ಅರ್ಧದಿನದ ವೇತನ ಕೊಟ್ಟರೆ ಅದನ್ನು ಸ್ವೀಕರಿಸಬಾರದು ಎಂದು ಸಭೆಯಲ್ಲಿ ತೀರ್ಮಾನಿಸಿದ್ದು, ಅರ್ಧ ವೇತನವನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+