ರಾಯಚೂರು : ಅಕ್ಟೋಬರ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ರಾಯಚೂರು, ಜೂ.23 : ರಾಯಚೂರಿನಲ್ಲಿ ಅಕ್ಟೋಬರ್ 9ರಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನಕ್ಕೆ ಸುಮಾರು ಐದು ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸರ್ಕಾರ 2 ಕೋಟಿ ರೂ.ಗಳನ್ನು ನೀಡಲಿದೆ.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಸೋಮವಾರ ಸಂಜೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಅಕ್ಟೋಬರ್ 9, 10 ಮತ್ತು 11 ರಂದು ಕೃಷಿ ವಿವಿ ಆವರಣದಲ್ಲಿ ಸಮ್ಮೇಳನ ನಡೆಸಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. [ರಾಯಚೂರಿನಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನ]

ಸಭೆಯಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು, ಸಮ್ಮೇಳನಕ್ಕೆ 5 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಸರ್ಕಾರ 2 ಕೋಟಿ ರೂ. ನೀಡಲಿದ್ದು, ಉಳಿದ ಮೊತ್ತವನ್ನು ನಾನಾ ಮೂಲಗಳಿಂದ ಸಂಗ್ರಹಿಸಬೇಕಾಗಿದೆ ಎಂದು ಹೇಳಿದರು. [81ನೇ ಸಾಹಿತ್ಯ ಸಮ್ಮೇಳನದ ಚಿತ್ರಗಳು]
ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕಳೆದ ಬಾರಿ ಹಾವೇರಿಯಲ್ಲಿ ಎದುರಾದಂತಹ ಸಮಸ್ಯೆ ಬರಬಾರದು ಎಂಬ ಕಾರಣಕ್ಕೆ ರಾಯಚೂರು ನಗರದಲ್ಲೇ ನಡೆಸಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿತ್ತು.












Click it and Unblock the Notifications