ರಾಯಚೂರು ವಿವಿಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ನಾಮಕರಣ ವಿಧೇಯಕ ಅಂಗೀಕಾರ

ಬೆಳಗಾವಿ, ಡಿಸೆಂಬರ್‌ 17: ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, 2024ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಪರ್ಯಾಲೋಚನೆಗೆ ಪ್ರಸ್ತಾಪಿಸಿದಾಗ, ಸದನ ಧ್ವನಿ ಮತದಿಂದ ವಿಧೇಯಕಕ್ಕೆ ಅಂಗೀಕಾರ ನೀಡಿತು.

Raichur university to be renamed as maharshi valmiki vishwavidyalaya bill passed

ಈ ಹಿಂದೆ ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಮರು ನಾಮಕರಣಗೊಂಡಿದೆ. ಇದೇ ವೇಳೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ ಅನುಮೋದನೆಗೆ ಪ್ರಸ್ತಾಪಿಸಿದಾಗ ಯಾವುದೇ ಚರ್ಚೆ ಇಲ್ಲದೆ ಸದನ ಅಂಗೀಕರಿಸಿತು. ಈ ವಿಧೇಯಕದ ಉದ್ದೇಶವೇನೆಂದರೆ ರಾಜ್ಯ ಸರ್ಕಾರ ಮೂಲಕದ ಸಂಬAಧಪಟ್ಟ ಕ್ಷೇತ್ರದಿಂದ ವಿಶೇಷ ತಜ್ಞರನ್ನು ವಿಶ್ವ ವಿದ್ಯಾನಿಲಯ ಆಡಳಿತ ಮಂಡಳಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸುವುದಾಗಿದೆ.

ತ್ಯಾಜ್ಯ ವಿಲೇವಾರಿಯಲ್ಲಿ ನ್ಯೂನತೆ ಕಂಡುಬಂದಲ್ಲಿ ಮುಚ್ಚಲು ಆದೇಶ

ಕೈಗಾರಿಕೆಗಳ ತ್ಯಾಜ್ಯ ವಿಲೇವಾರಿಗೆ ಅಗತ್ಯ ವ್ಯವಸ್ಥೆಯನ್ನು ಕಾಲ ಕಾಲಕ್ಕೆ ಪ್ರಾದೇಶಿಕ ಕಛೇರಿಯ ಅಧಿಕಾರಿಗಳು ಪರಿವೀಕ್ಷಿಸಿ, ನ್ಯೂನತೆಗಳು ಕಂಡು ಬಂದಲ್ಲಿ ಕಾಯಿದೆಗಳ ಮಾನದಂಡ ಅನುಸರಿಸಿ, ಜಲ ಕಾಯ್ದೆ,ವಾಯು ಕಾಯ್ದೆ ಅಡಿಯಲ್ಲಿ ಮುಚ್ಚುವ ಆದೇಶ ನೀಡಲಾಗುವುದು ಎಂದು ಅರಣ್ಯ ಜೀವಿಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೈಗಾರಿಕೆಗಳಿಗೆ ಷರತ್ತುಬದ್ದ ಸಮ್ಮತಿ ಪತ್ರಗಳನ್ನು ನೀಡುತ್ತಿದ್ದು, ಮಂಡಳಿಯ ಷರತ್ತುಗಳ ಅನ್ವಯ ತ್ಯಾಜ್ಯ ನೀರನ್ನು ಮಂಡಳಿಯು ನಿಗದಿಪಡಿಸಿರುವ ಮಾನದಂಡಗಳಿಗೆ ಕೈಗಾರಿಕೆಯಲ್ಲಿ ಸ್ಥಾಪಿತವಾಗಿರುವ ಶುದ್ಧಿಕರಣ ಘಟಕಗಳಲ್ಲಿ ಶುದ್ಧಿಕರಿಸಿ,ಶುದ್ಧಿಕರಿಸಿದ ನೀರನ್ನು ತೋಟಗಾರಿಕೆ ಹಾಗೂ ವ್ಯವಸಾಯಕ್ಕೆ ಬಳಸಬೇಕಾಗಿರುತ್ತದೆ.

ಸಣ್ಣ ಕೈಗಾರಿಕೆಗಳು ಕಾರ್ಯಚಟುವಟಿಕೆಗಳಿಂದ ತಮ್ಮ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಮಂಡಳಿಯಿಂದ ಸಮ್ಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ಸಾಮೂಹಿಕ ಶುದ್ಧಿಕರಣ ಘಟಕಗಳಿಗೆ ನೀಡಬೇಕಾಗಿರುತ್ತದೆ. ಅಪಾಯಕಾರಿ ತ್ಯಾಜ್ಯಗಳನ್ನು ಮಂಡಳಿಯಿಂದ ಅಧಿಕಾರ ಪತ್ರ ಪಡೆದ ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ನೀಡಬೇಕಾಗಿರುತ್ತದೆ. ಹಾಗೂ ಕೈಗಾರಿಕೆಗಳಿಂದ ಉತ್ಪತ್ತಿಯಾದ ಇತರ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಿರುತ್ತದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+