ರೈಲ್ವೆ ಬಂದ್ : ಯಾವುದೇ ರೈಲು ಸಂಚಾರದಲ್ಲಿ ವ್ಯತ್ಯಯವಿಲ್ಲ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 15 : ಕನ್ನಡ ಒಕ್ಕೂಟ ಕರೆ ನೀಡಿರುವ ರೈಲ್ವೆ ಬಂದ್‌ನಿಂದಾಗಿ ಯಾವುದೇ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲಾ ರೈಲುಗಳು ಸಂಚಾರ ನಡೆಸುತ್ತಿವೆ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ.

ಬೆಂಗಳೂರು ನಗರದ ರೈಲು ನಿಲ್ದಾಣಗಳು, ಮಂಡ್ಯ ಜಿಲ್ಲೆಯ ವಿವಿಧ ರೈಲು ನಿಲ್ದಾಣಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ರೈಲ್ವೆ ಬಂದ್‌ಗೆ ಕರೆ ನೀಡಲಾಗಿದೆ.[ಕರ್ನಾಟಕದಲ್ಲಿ ರೈಲ್ವೆ ಬಂದ್, ಕ್ಷಣ-ಕ್ಷಣದ ಮಾಹಿತಿ]

indian railways

ಮುಂಜಾನೆಯಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲು ನಿಲ್ದಾಣದಲ್ಲಿ ನಿಗದಿತ ವೇಳಾಪಟ್ಟಿಯಂತೆ ಸಂಚಾರ ನಡೆಸುತ್ತಿವೆ. ಪ್ರಯಾಣಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.[ಪ್ರಯಾಣಿಕರೇ ಗಮನಿಸಿ, ರೈಲ್ವೆ ಬಂದ್ ಬಗ್ಗೆ ಆತಂಕ ಬೇಡ]

ಮಂಡ್ಯ ಜಿಲ್ಲೆಯ ವಿವಿಧ ರೈಲು ನಿಲ್ದಾಣಗಳಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka Railway police says that all trains in the state are running as per schedule. There is no cause for panic, the police also say.
Please Wait while comments are loading...