ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಾದ ಕಳ್ಳರ ಹಾವಳಿ: ಕಡಿವಾಣಕ್ಕೆ ಸೂಚನೆ

ಹುಬ್ಬಳ್ಳಿ, ಡಿಸೆಂಬರ್ 27: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿವೆ. ಕಳ್ಳರ ಹಾವಳಿ ಹೆಚ್ಚುತ್ತಿದ್ದ ಆತಂಕಗೊಂಡ ಸಾರ್ವಜನಿಕರೇ ದೂರುಗಳನ್ನು ನೀಡುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಿ ಸೂಕ್ತ ಭದ್ರತೆ ಮತ್ತು ಸುರಕ್ಷತೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಹೆಚ್ಚಾಗಿದೆ.

ಸಾರ್ವಜನಿಕ ದೂರುಗಳು ಹೆಚ್ಚಾಗುತ್ತಿದ್ದಂತೆ ರೈಲ್ವೆ ಇಲಾಖೆ ಸರ್ಕಾರ ಅಲರ್ಟ್ ಆಗಿದೆ. ಹುಬ್ಬಳ್ಳಿ ರೈಲು ನಿಲ್ದಾಣದ ಪುನರಾಭಿವೃದ್ಧಿ ಸೇರಿ ಹಲವು ಅಭಿವೃದ್ಧಿ ಕಾಮಗಾರಿಗಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಈ ರೈಲ್ವೆ ಸುರಕ್ಷತಾ ಪಡೆ (ಆರ್​ಪಿಎಫ್), ರೈಲ್ವೆ ಪೋಲಿಸ್ ಹಾಗೂ ಇತರೆ ಭದ್ರತಾ ಅಧಿಕಾರಿಗಳು ಹೆಚ್ಚಿನ ಸುರಕ್ಷಾ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು.

Railway Officials Should Break for Theft in Hubballi Railway station: Pralhad Joshi Instructed

ಪ್ರಯಾಣಿಕರ ಹಾಗೂ ಅವರ ಸರಕುಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಕಟ್ಟುನಿಟ್ಟಿನ ಆದೇಶ ನೀಡಿದರು. ಕಳ್ಳತನದ ಪ್ರಕರಣಗಳ ತನಿಖೆಯನ್ನು ಸೂಕ್ತ ಸಮಯದಲ್ಲಿ ಕೈಗೊಂಡು ಸ್ವತ್ತು, ಹಣ ಕಳೆದುಕೊಂಡವರಿಗೆ ಆದಷ್ಟು ಬೇಗ ನ್ಯಾಯ ದೊರಕಿಸಬೇಕೆಂದು ರೈಲ್ವೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸೇತುವೆ ನಿರ್ಮಾಣ ಪೂರ್ಣಗೊಳಿಸಿ: ಜೋಶಿ

ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಹೊಸದಾಗಿ ನೇಮಕಾತಿ ಹೊಂದಿದ ಡಿ ಗ್ರುಪ್ ಅಭ್ಯರ್ಥಿಗಳಿಗೆ ಬೇಗನೇ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದರು.

ವಾರದಲ್ಲಿ 2 ಬಾರಿ ಸಂಚರಿಸುವ ಹುಬ್ಬಳ್ಳಿ-ವಾರಾಣಾಸಿ ಎಕ್ಸ್​ಪ್ರೆಸ್ ರೈಲಿಗೆ ಕೆಲವು ನಿಲ್ದಾಣಗಳಲ್ಲಿ ನಿಲುಗಡೆ, ಕುಂದಗೋಳ ಮೇಲ್ಸೇತುವೆ ಪಕ್ಕದ ಸರ್ವಿಸ್ ರಸ್ತೆ ನಿರ್ವಣ, ಅಣ್ಣಿಗೇರಿ ನಿಲ್ದಾಣದ ಹತ್ತಿರ ಮೇಲ್ಸೇತುವೆ ನಿರ್ವಣ, ಧಾರವಾಡ ವಿವಿ ಹಾಗೂ ತಪೋವನದ ಹತ್ತಿರ ಕೆಳಸೇತುವೆ ನಿರ್ವಣ, ಕೋವಿಡ್ ಸಮಯದಲ್ಲಿ ಸ್ಥಗಿತಗೊಂಡಿದ್ದ ರೈಲ್ವೆ ಓಡಾಟಗಳ ಪುನರಾರಂಭ ಮಾಡುವುವುದ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸ್ಥಳೀಯ ಶಾಸಕರಾದ ಮಹೇಶ ಟೆಂಗಿನಕಾಯಿ, ನೈಋತ್ಯ ರೈಲ್ವೆ ಮಹಾಪ್ರಭಂದಕ ಸಂಜೀವ ಕಿಶೋರ, ರೈಲ್ವೆ ಅಧಿಕಾರಿಗಳು ಇದ್ದರು.

Railway Officials Should Break for Theft in Hubballi Railway station: Pralhad Joshi Instructed

ಧಾರವಾಡ ಯುವನಿಧಿ ನೋಂದಣಿ ಆರಂಭ

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಯುವನಿಧಿ' ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೆಕೆಂದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಯುವನಿಧಿ ಯೋಜನೆಯ ಬಿತ್ತಿಪತ್ರವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಈ ಯೋಜನೆಯಡಿಯಲ್ಲಿ ಪದವೀಧರರರು, ಡಿಪ್ಲೋಮಾ ತೇರ್ಗಡೆ ಆದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿದವರು, 2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳು ಯುವನಿಧಿಗೆ ಅರ್ಹರು.

ಸೇವಾಸಿಂಧು ನಲ್ಲಿ ನೋಂದಣಿ ಮಾಡಿಕೊಳ್ಳಿ

ಈ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್‌ಸೈಟ್ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯುವನಿಧಿ ಯೋಜನ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಜಿಲ್ಲೆಯಲ್ಲಿ ಆರಂಭವಾಗಿದೆ. ನೋಂದಣಿಯದ ಪದವೀಧರರಿಗೆ ಮಾಸಿಕ 3.000 ಹಾಗೂ ಡಿಪ್ಲೋಮಾ ತೆರ್ಗಡೆಯಾದವರಿಗೆ ಮಾಸಿಕ 1.500 ರೂಪಾಯಿ ನಿರುದ್ಯೋಗ ಭತ್ಯೆ ಡಿಬಿಟಿ ಮೂಲಕ ಅರ್ಹರ ಖಾತೆ ಜಮೆ ಆಗಲಿದೆ ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+