KRS Dam: ರಾಜ್ಯದಲ್ಲಿ ಮಳೆ; ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರಂಭವಾಗಿದೆ. ಹಲವು ಕಡೆಗಳಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಭೂಮಿ ತಂಪಾಗಿದೆ. ಒಂದು ಕಡೆ ಬೇಸಿಗೆ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದರೂ ಮತ್ತೊಂದು ಕಡೆ ಮಳೆಯಾಗುತ್ತಿರುವುದು ಜನರಲ್ಲಿ ಸಂತಸ ಮೂಡಿಸಿದೆ. ಯುಗಾದಿ ಬಳಿಕ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದರೆ, ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದೆ. ಸದ್ಯ ಮಳೆ ಆರಂಭವಾಗಿದ್ದು ಮಳೆ ಪ್ರಮಾಣ ಹೆಚ್ಚಾದರೆ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಆರಂಭವಾಗುವ ಸಾಧ್ಯತೆ ಇದೆ.

ಸದ್ಯದ ಮಟ್ಟಿಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ಕಡಿಮೆ ಇದೆ. ಕಳೆದ ವರ್ಷ ವ್ಯಾಪಕ ಮಳೆಯಾಗಿದ್ದರಿಂದ ಎಲ್ಲಾ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಡಿಸೆಂಬರ್ ಕೊನೆಯವರೆಗೂ ಜಲಾಶಯಗಳಲ್ಲಿ ನೀರಿನ ಪ್ರಮಾಣ ಅಷ್ಟೇನೂ ಕಡಿಮೆಯಾಗಿರಲಿಲ್ಲ, ಆದರೆ ಬೇಸಿಗೆ ಆರಂಭವಾದ ಬಳಿಕ ನೀರಿನ ಮಟ್ಟ ಕಡಿಮೆಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಮಾರ್ಚ್ 28ರಂದು 389.01 ಟಿಎಂಸಿ ನೀರು ಸಂಗ್ರಹದಲ್ಲಿದೆ. ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ನೋಡಿ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 543.94 ಮೀಟರ್ / 62.79 ಟಿಎಂಸಿ
ಒಳಹರಿವು: 265 ಕ್ಯೂಸೆಕ್ಸ್
ಹೊರಹರಿವು: 7595 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 542.94 ಮೀಟರ್ / 69.94 ಟಿಎಂಸಿ
ಒಳಹರಿವು: 0
ಹೊರಹರಿವು: 3298 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 583.46 ಮೀಟರ್ / 13.45 ಟಿಎಂಸಿ
ಒಳಹರಿವು: 0
ಹೊರಹರಿವು: 797 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2834.22 ಅಡಿ / 3.57 ಟಿಎಂಸಿ
ಒಳಹರಿವು: 84 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2900.00 ಅಡಿ / 19.85 ಟಿಎಂಸಿ
ಒಳಹರಿವು: 21 ಕ್ಯೂಸೆಕ್ಸ್
ಹೊರಹರಿವು: 330 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 105.29 ಅಡಿ / 27.25 ಟಿಎಂಸಿ
ಒಳಹರಿವು: 89 ಕ್ಯೂಸೆಕ್ಸ್
ಹೊರಹರಿವು: 4112 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2270.19 ಅಡಿ / 11.78 ಟಿಎಂಸಿ
ಒಳಹರಿವು: 78 ಕ್ಯೂಸೆಕ್ಸ್
ಹೊರಹರಿವು: 600 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2131.87 ಅಡಿ / 42.80 ಟಿಎಂಸಿ
ಒಳಹರಿವು: 67 ಕ್ಯೂಸೆಕ್ಸ್
ಹೊರಹರಿವು: 3654 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1593.41 ಅಡಿ / 14.12ಟಿಎಂಸಿ
ಒಳಹರಿವು: 0
ಹೊರಹರಿವು: 6236 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2137.35 ಅಡಿ / 25.60 ಟಿಎಂಸಿ
ಒಳಹರಿವು: 0
ಹೊರಹರಿವು: 3482 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2058.39 ಅಡಿ / 15.30 ಟಿಎಂಸಿ
ಒಳಹರಿವು: 0
ಹೊರಹರಿವು: 194 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 510.67 ಮೀಟರ್ / 33.44 ಟಿಎಂಸಿ
ಒಳಹರಿವು: 0
ಹೊರಹರಿವು: 1800 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 489.11 ಮೀಟರ್ / 20.96 ಟಿಎಂಸಿ
ಒಳಹರಿವು: 86 ಕ್ಯೂಸೆಕ್ಸ್
ಹೊರಹರಿವು: 0
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2137.35 ಅಡಿ / 28.17 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್












Click it and Unblock the Notifications