ಕರ್ನಾಟಕ: ಮಾರ್ಚ್ 20 ರಂದು ಈ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
ಬೆಂಗಳೂರು, ಮಾರ್ಚ್ 15: ರಾಜ್ಯಾದ್ಯಂತ ವಿಪರೀತ ಸೆಕೆ ಮುಂದುವರೆದಿದೆ. ಇದನ್ನು ಮಳೆ ಬರುವ ಮುನ್ಸೂಚನೆ ಎಂದೂ ಕರೆಯಬಹುದಾಗಿದೆ.
ಹೌದು, ರಾಜ್ಯದ 4 ಜಿಲ್ಲೆಗಳಲ್ಲಿ ಮಾರ್ಚ್ 20 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವರಾತ್ರಿಯಿಂದ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿತ್ತು. ಇದೀಗ ಮಾರ್ಚ್ 20 ರಂದು ಮತ್ತೆ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಮಾರ್ಚ್ 20 ರಂದು ಮಳೆಯಾಗಲಿರುವ ಜಿಲ್ಲೆಗಳು
ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಹಾಸನ,ಕೊಡಗಿನಲ್ಲಿ ಮಳೆಯಾಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸೆಕೆ ಸ್ವಲ್ಪ ಹೆಚ್ಚಿರಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಐಎಎಲ್‌ನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಅತಿ ಹೆಚ್ಚು, ಅತಿ ಕಡಿಮೆ ಉಷ್ಣಾಂಶವೆಲ್ಲಿ?
ಕಲಬುರಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ.
Recommended Video

ಲಡಾಖ್ ಜಮ್ಮು ಕಾಶ್ಮೀರದಲ್ಲಿ ಮಳೆ
ಮಾರ್ಚ್ 16 ರಿಂದ 19ರವರೆಗೆ ಜಮ್ಮು ಮತ್ತು ಕಶ್ಮೀರ, ಲಡಾಖ್, ಗಲ್ಗಿಟ್, ಬಲ್ಟಿಸ್ತಾನ, ಮುಜಾಫರಾಬಾದ್‌ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications