ವಾಯುಭಾರ ಕುಸಿತ; 4 ದಿನ ಕರ್ನಾಟಕದಲ್ಲಿ ಮಳೆ
ಬೆಂಗಳೂರು, ನವೆಂಬರ್ 30 : ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾಗ ಕುಸಿತ ಉಂಟಾಗಿದೆ. ಡಿಸೆಂಬರ್ 4ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ 36 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತ ಉಂಟಾಗಿದ್ದು, ಅದು ಸಹ ಚಂಡಮಾರುತವಾಗಿ ಪರಿವರ್ತನೆಗೊಂಡರೆ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಲಿದೆ. ಡಿಸೆಂಬರ್ 4ರ ತನಕ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಡಿಸೆಂಬರ್ 2ರಿಂದ ತಮಿಳುನಾಡು ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಪುದುಚೇರಿ, ಕಾರೈಕಲ್, ಮಾಹೆ, ಲಕ್ಷದ್ವೀಪ, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಿವಾರ್ ಚಂಡಮಾರುತದ ಪರಿಣಾಮ ಬೆಂಗಳೂರು ನಗರದಲ್ಲಿ ಮಳೆಯಾಗಿತ್ತು. ಎರಡು ದಿನದಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಉಷ್ಣಾಂಶದಲ್ಲಿ ಇಳಿಕೆಯಾಗಿದೆ.
ಡಿಸೆಂಬರ್ 1ರಿಂದ 4ರ ತನಕ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿಯೂ ಮಳೆಯಾಗುವ ನಿರೀಕ್ಷೆ ಇದೆ.












Click it and Unblock the Notifications