Rain News: 48 ಗಂಟೆಗಳ ಕಾಲ ಭರ್ಜರಿ ಮಳೆ, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ!
ಮಳೆ.. ಮಳೆ.. ಎಲ್ಲೆಲ್ಲೂ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಳೆಯ ಅಬ್ಬರಕ್ಕೆ ಜನರ ಜೀವನ ಕೂಡ ಸಂಕಷ್ಟದ ಸುಳಿಗೆ ಸಿಲುಕಿದ್ದು, ಮಳೆ ನಿಂತರೆ ಸಾಕಪ್ಪಾ ಅಂತಾ ಜನರು ಕೂಡ ಕಾಯ್ತಾ ಇದ್ದಾರೆ. ಪರಿಸ್ಥಿತಿ ಹಿಗಿದ್ದಾಗಲೇ ಮುಂದಿನ 48 ಗಂಟೆಗಳ ಕಾಲ ಮತ್ತಷ್ಟು ಜೋರಾಗಿ ಮುಂಗಾರು ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ! ಹಾಗಾದ್ರೆ ಎಲ್ಲೆಲ್ಲಿ ನಾಳೆ ಶಾಲೆ, ಕಾಲೇಜುಗಳು ಬಂದ್ ಆಗಲಿವೆ? ಮಾಹಿತಿಗಾಗಿ ಮುಂದೆ ಓದಿ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಇದರ ಜತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ದಾವಣಗೆರೆ, ಮೈಸೂರು & ಮಂಡ್ಯ ಸೇರಿ ಚಿತ್ರದುರ್ಗ, ತುಮಕೂರು, ಕಲಬುರಗಿ, ಬೀದರ್, ಕೋಲಾರದಲ್ಲೂ ಮಳೆ ಅಬ್ಬರ ಗ್ಯಾರಂಟಿ ಆಗಿದೆ. ಅದರಲ್ಲೂ ಬೆಂಗಳೂರಲ್ಲಿ ಇನ್ನೂ 3 ದಿನಗಳ ಕಾಲ ಸೂರ್ಯ ಕಾಣುವುದೇ ಡೌಟ್. ಹೀಗೆ ಮುಂದಿನ 3 ದಿನ ಇದೇ ರೀತಿ ಮಳೆ ಅಬ್ಬರ ಇರಲಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ನಾಳೆ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ ಯಾವ ಊರಲ್ಲಿ ಅನ್ನೋದನ್ನ ತಿಳಿಯಲು ಮುಂದೆ ಓದಿ.

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕದ ಕರಾವಳಿ ಭಾಗ ಹಾಗೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ಈಗ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆ & ಕಾಲೇಜುಗಳಿಗೆ ನಾಳೆ ರಜೆ ನೀಡಿ ಹೊಸನಗರ ತಹಸೀಲ್ದಾರ್ ರಶ್ಮಿ & ತೀರ್ಥಹಳ್ಳಿ ತಹಸೀಲ್ದಾರ್ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ ಇದರ ಜೊತೆಗೆ, ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ & ಕಾಲೇಜುಗಳಿಗೆ ಜುಲೈ 18ಕ್ಕೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳಾದ ಲಕ್ಷ್ಮೀಪ್ರಿಯಾ ಆದೇಶ ನೀಡಿದ್ದು, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಕೊಡಗು ಜಿಲ್ಲೆಯಲ್ಲೂ ರಜೆ ಘೋಷಣೆ
ಮತ್ತೊಂದು ಕಡೆ ಹಾಸನ ಜಿಲ್ಲೆ ಸಕಲೇಶಪುರ, ಆಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೇ ಕೊಡಗು ಜಿಲ್ಲೆಯಲ್ಲೂ ನಾಳೆಯ ದಿನ ಶಾಲೆ & ಕಾಲೇಜು ಬಂದ್ ಆಗಲಿವೆ. ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕಿನ ಅಂಗನವಾಡಿ ಹಾಗು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮುಂದಿನ 48 ಗಂಟೆ ರಣಭೀಕರ ಮಳೆ!
ಒಟ್ನಲ್ಲಿ ಮಳೆರಾಯ ಬಿಡುವು ನೀಡದೆ ಕರ್ನಾಟಕ ರಾಜ್ಯದಲ್ಲಿ ಭರ್ಜರಿಯಾಗಿ ಸುರಿಯುತ್ತಿದ್ದು, ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ ಹೀಗಾಗಿ ಎಲ್ಲೆಲ್ಲೂ ಭಾರಿ ಮಳೆ ಬೀಳುತ್ತಿದೆ. ಕರಾವಳಿ & ಮಲೆನಾಡು ಕರ್ನಾಟಕದಲ್ಲಿ ಮಾತ್ರ ಅಲ್ಲ, ಉತ್ತರ ಕರ್ನಾಟಕ & ದಕ್ಷಿಣ ಕರ್ನಾಟಕದ ಭಾಗದಲ್ಲಿ ಕೂಡ ಮಳೆರಾಯ ಅಬ್ಬರಿಸಿದ್ದು ಎಲ್ಲೆಲ್ಲೂ ಬರೀ ನೀರೆ ಕಾಣ್ತಿದೆ ಪರಿಸ್ಥಿತಿ ಹೀಗಿದ್ದಾಗಲೇ ಮುಂದಿನ 48 ಗಂಟೆ ಕಾಲ ಮತ್ತಷ್ಟು ರಣಭೀಕರ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗೆ ಭಾರಿ ಮಳೆ ಬೀಳುವ ಜಿಲ್ಲೆಗಳಲ್ಲಿ ಜನರು ಎಚ್ಚರಿಕೆ ವಹಿಸುವುದು ಅತ್ಯಗತ್ಯ.
ಕರ್ನಾಟಕದ ಡ್ಯಾಂಗಳಿಗೆ ಭರ್ಜರಿ ನೀರು!
ಮಳೆ.. ಮಳೆ.. ಮಳೆ.. ಎಲ್ಲೆಲ್ಲೂ ಬರೀ ಮಳೆಯ ಬಗ್ಗೆಯೇ, ಇದೀಗ ಚರ್ಚೆ ಜೋರಾಗುತ್ತಿದೆ. ಕರ್ನಾಟಕದ ಪಾಲಿಗೆ 2024ರ ಮುಂಗಾರು ಮಳೆ ಅದೃಷ್ಟ ತರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಯಾಕಂದ್ರೆ ಅಂದುಕೊಂಡ ರೀತಿಯಲ್ಲೇ ಇದೀಗ ಮುಂಗಾರು ಮಳೆ ಕರ್ನಾಟಕದಲ್ಲಿ ಬೀಳುತ್ತಿದ್ದು, ಮುಂಗಾರು ಮಳೆ ಈಗ ಫುಲ್ ಅಲರ್ಟ್ ಆಗಿದ್ದು, ಎಲ್ಲೆಲ್ಲೂ ಭಾರಿ ಮಳೆಯನ್ನು ಸುರಿಸುತ್ತಿದೆ. ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳೂ ಸೇರಿ ಉತ್ತರ ಕರ್ನಾಟಕ & ದಕ್ಷಿಣ ಕರ್ನಾಟಕ ಭಾಗದಲ್ಲೂ ಭರ್ಜರಿಯಾಗಿ ಮಳೆ ಬೀಳುತ್ತಿದೆ. ಹೀಗಾಗಿ ಕರ್ನಾಟಕದ ಡ್ಯಾಂಗಳಿಗೆ ಭಾರಿ ಪ್ರಮಾಣದ ನೀರು ಬರುತ್ತಿದೆ.












Click it and Unblock the Notifications