Karnataka Weather: ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!

ಮಿಹಾಂಗ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಬೀರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ರಾಜ್ಯದಲ್ಲಿ ಡಿಸೆಂಬರ್ 7ರವರೆಗೂ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಇಂದು ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ.

ಡಿಸೆಂಬರ್ 4 ಮತ್ತು 5 ರಂದು ದಕ್ಷಿಣ ಒಳನಾಡಿನ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ಶುಕ್ರವಾರ ಮತ್ತು ಶನಿವಾರ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರ ಕುದುರೆಮುಖ, ಬಂಟ್ವಾಳ, ಪುತ್ತೂರು, ಮೂಡಬಿದಿರೆ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

 Rain Alert: Heavy Rain Expected in Karnataka Districts on Untill December 5th

ಶುಕ್ರವಾರ ರಾತ್ರಿ ವ್ಯಾಪಕ ಮಳೆ

ಶುಕ್ರವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಭಾನುವಾರ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಭಾನುವಾರ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.

ಸೋಮವಾರ ಡಿಸೆಂಬರ್ 4ರಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ

ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪೆಯಲ್ಲಿ 92.5 ಮಿ.ಮೀ ಮಳೆಯಾಗಿದ್ದು ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಚಿಕ್ಕೋಡಿ ತಾಲೂಕಿನ ಉಮಾರ್ನಿಯಲ್ಲಿ 85.5 ಮಿ.ಮೀ ಮಳೆಯಾಗಿದೆ.

ಮಾದಿಹಳ್ಳಿ 85 ಮಿ.ಮೀ., ಬಂಬಲವಾಡಿಯಲ್ಲಿ 84 ಮಿ.ಮೀ., ಸುಲ್ತಾನ್‌ಪುರದಲ್ಲಿ 78 ಮಿ.ಮೀ, ಜೋಡಕುರಲಿಯಲ್ಲಿ 69 ಮಿ.ಮೀ. ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಹೆರೆಂಗಡಿಯಲ್ಲಿ 37.5 ಮಿ.ಮೀ ಮಳೆಯಾಗಿದೆ. ಧಾರವಾಡ ಜಿಲ್ಲೆಯ ಹಳ್ಳಿಗೇರಿಯಲ್ಲಿ 32 ಮಿಮೀ ಮಳೆ ಸುರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+