Rain Alert: ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಒಂದು ದಿನ ಭಾರಿ ಬಿಸಿಲು ಮತ್ತೊಂದು ದಿನ ಮಳೆ, ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಬೆಂಗಳೂರಿನಲ್ಲಿ ಒಂದು ದಿನ ಉತ್ತಮ ಮಳೆಯಾದ ಬಳಿಕ ಮತ್ತಾಗಲೇ ಬಿಸಿಲು ಹೆಚ್ಚಾಗಿತ್ತು. ಆದರೆ ಮುಂದಿನ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ.

ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ ಎಂದು ಹೇಳಿದೆ.

Rain Alert heavy Rain Expected in Karnataka for Next 5 Days

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹೇಳಿದೆ. ಮೇ 10 ರವರೆಗೆ ರಾಜ್ಯದಲ್ಲಿ ಸತತವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಹಳೇ ಮೈಸೂರು ಭಾಗದಲ್ಲಿ ಭಾರಿ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.

ಬೆಂಗಳೂರಿಗೆ ಮಳೆ ಯಾವಾಗ?

ಬೆಂಗಳೂರಿನಲ್ಲಿ ಕೂಡ ಸೋಮವಾರ (ಮೇ 6) ಮಳೆಯಾಗುವ ಸಾಧ್ಯತೆ ಇದೆ. ಮೇ 6ರಂದು ಸಾಧಾರಣ ಮಳೆಯಾಗಲಿದ್ದು, ಮೇ 7ರಂದು ನಗರದಲ್ಲಿ ಗುಡುಗು ಮಿಂಚಿನೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

ಈ ತಿಂಗಳ ಆರಂಭದಲ್ಲಿ ಎರಡು ದಿನ ನಗರದಲ್ಲಿ ಮಳೆಯಾಗಿತ್ತು, ಮಳೆ ಬಂತು ವಾತಾವರಣ ತಂಪಾಗಲಿದೆ ಎಂದು ಜನ ಅಂದುಕೊಳ್ಳುವಾಗಲೇ ಮಳೆ ಮಾಯವಾಗಿತ್ತು, ಮತ್ತೆ ಬಿಸಿಲು ಹೆಚ್ಚಾಗಿತ್ತು. ಈಗ ಒಂದು ವಾರ ಮಳೆ ಸುರಿಯಲಿದ್ದು ಬೆಂಗಳೂರು ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ.

ಯಾವ ಜಿಲ್ಲೆಗಳಿಗೆ ಮಳೆ?

ಮೇ 6ರಂದು, ಸೋಮವಾರ ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹುಬ್ಬಳ್ಳಿ, ಬೆಳಗಾವಿ, ದಕ್ಷಿಣ ಕನ್ನಡ, ಚಾಮರಾಜನಗರ, ದಾವಣಗರೆ ಜಿಲ್ಲೆಗಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 7ರಿಂದ 9ರವರೆಗೆ ಮಳೆ ಬಿರುಸು ಪಡೆಯಲಿದ್ದು ಶಿವಮೊಗ್ಗ, ದಾವಣಗೆರೆ, ಬೀದರ್, ಕಲಬುರ್ಗಿ, ಬಳ್ಳಾರಿ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಕೋಲಾರ, ತುಮಕೂರು, ಮಂಡ್ಯ, ರಾಮನಗರ, ಚಿತ್ರದುರ್ಗ ಸೇರಿದಂತೆ ಬಹುತೇಕ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಮೇ 11ರವರೆಗೆ ರಾಜ್ಯದಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+