Heavy Rain Alert: ಮುಂದಿನ ನಾಲ್ಕು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಯುಗಾದಿ ಬಳಿಕ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ತಂಪೆರದಿದ್ದ ವರುಣದೇವ ಬಳಿಕ ಮೂರು ದಿನಗಳಿಂದ ವಿಶ್ರಾಂತಿ ತೆಗೆದುಕೊಂಡಿದ್ದಾನೆ. ಏಪ್ರಿಲ್ 17ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದ್ದು ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಏಪ್ರಿಲ್ 22ರವರೆಗೆ ರಾಜ್ಯದಲ್ಲಿ ಮಳೆ ಬಗ್ಗೆ ಮುನ್ಸೂಚನೆ ಕೊಟ್ಟಿದ್ದು, ಮುಂದಿನ ನಾಲ್ಕು ದಿನ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಯಾವ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಏಪ್ರಿಲ್ 17, ಗುರುವಾರ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.
ಏಪ್ರಿಲ್ 18 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 20 ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹೇಳಿದೆ.
ಏಪ್ರಿಲ್ 21 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 22ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಏಪ್ರಿಲ್ 18, 19 ಮತ್ತು 20 ರಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ಇದ್ದು, ಮಳೆಯನ್ನು ನಿರೀಕ್ಷೆ ಮಾಡಬಹುದಾಗಿದೆ.












Click it and Unblock the Notifications