Rain Alert: ಶುಕ್ರವಾರದಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!
ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಕೂಡ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವಾರಣ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 8 ರಿಂದ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ನಾಳೆ (ಶುಕ್ರವಾರ) ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇಂದು (ಡಿ. 7) ಕೋಲಾರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ಡಿಸೆಂಬರ್ 8ರಿಂದ ಉತ್ತಮ ಮಳೆ
ಡಿಸೆಂಬರ್ 8ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ತುಮಕೂರು, ಬೆಂಗಳೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 9ರಂದು ಧಾರವಾಢ, ಯಾದಗಿರಿ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ತುಮಕೂರು, ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 10ರಂದು ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 11ರಂದು ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ತುಮಕೂರು, ಬೆಂಗಳೂರು, ಕೋಲಾರ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ಡಿಸೆಂಬರ್ 12ರಿಂದ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಲಿದ್ದು, ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಬಾರಿ ಮಳೆ ಕೊರತೆಯಾಗಿದ್ದು ಹಿಂಗಾರು ಕೂಡ ಹಲವು ಜಿಲ್ಲೆಗಳಲ್ಲಿ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ.












Click it and Unblock the Notifications