Rain Alert: ಡಿಸೆಂಬರ್ 8ರಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಚೆನ್ನೈ, ಆಂಧ್ರ ಪ್ರದೇಶದ ಕರಾವಳಿ ಭಾಗದ ಮೇಲೆ ಮಿಚಾಂಗ್ ಚಂಡಮಾರುತ ಅಪ್ಪಳಿಸಿದ್ದು ಭಾರಿ ಮಳೆಯಾಗುತ್ತಿದೆ. ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಆಗಿದ್ದು, ಮೋಡ ಕವಿದ ವಾತಾವರಣ ಇದೆ. ಹಲವು ಕಡೆಗಳಲ್ಲಿ ಸಾಧಾರಣ ಮಳೆಗೆ ಕಾರಣವಾಗಿದೆ.

ಡಿಸೆಂಬರ್ 8ರಿಂದ 11ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳು ಈ ದಿನಗಳಲ್ಲಿ ಉತ್ತಮ ಮಳೆಯನ್ನು ಪಡೆಯಲಿವೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಿದೆ.

 Rain Alert: Heavy Rain expexted in these Karnataka Districts from December 8th

ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಚಳಿ ಹೆಚ್ಚಾಗಿದೆ. ವಾತಾವರಣ ತಂಪಾಗಿದ್ದು, ಇಬ್ಬನಿ ಕೂಡ ಹೆಚ್ಚಾಗಿ ಬೀಳುತ್ತಿದೆ. ಚಂಡಮಾರುತದ ಪ್ರಭಾವದಿಂದ ಈ ರೀತಿ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ

ಇಂದು (ಮಂಗಳವಾರ) ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬುಧವಾರ ದಕ್ಷಿಣ ಒಳನಾಡು, ಕರಾವಳಿ ಮತ್ತು ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 7ರಂದು ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಕೋಲಾರ, ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಬೀಳಲಿದೆ ಎಂದು ವರದಿಯಲ್ಲಿ ಹೇಳಿದೆ. ಡಿಸೆಂಬರ್ 8ರಂದು ಮಂಡ್ಯ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 9 ರಂದು ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 10ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಡಿಸೆಂಬರ್ 11ರಂದು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+