Bengaluru Rain Update: ಇಂದು ಬೆಂಗಳೂರು ಸೇರಿಂದತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಬೀಳುವ ಮನ್ಸೂಚನೆ, ಮಾಹಿತಿ
ಬೆಂಗಳೂರು, ಮೇ, 08: ಬಂಗಾಳಕೊಲ್ಲಿ ಮೋಚಾಚಂಡಮಾರುತ ಎದ್ದಿದ್ದು, ಇದರ ಪ್ರಭಾವ ರಾಜ್ಯದ ಮೇಲೂ ಬೀರಿದೆ. ಅದರಲ್ಲೂ ಇನ್ನು ಒಂದು ವಾರಗಳ ಕಾಲ ಸೈಕ್ಲೋನ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗೆಯೆ ಬೆಂಗಳೂರಿನಲ್ಲಿ ಇಂದು ಮೋಡ ಮುಚ್ಚಿದ ವಾತಾವರಣವಿದ್ದು, ನಗರದಲ್ಲಿ ಇಂದು ಕೂಡ ಮಳೆ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಬಿಸಿಲಿನ ಧಗೆಗೆ ಕೆಂಡದಂತಾಗಿದ್ದ ಭೂಮಿ ತಂಪಾಗುತ್ತಿದೆ.
ಈಗಾಗಲೇ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆ ಸುರಿದಿದ್ದು, ಬಿಸಿಲಿನ ಬೇಗೆಯಿಂದ ಬೆಂದಿದ್ದ ಇಲ್ಲಿನ ಜನ ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಹಾಗೆಯೆ ಹವಾಮಾನ ಇಲಾಖೆಯು ಸೋಮವಾರದ ವರದಿ ಪ್ರಕಟಿಸಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಮಳೆ ಆಗುವ ಮುನ್ಸೂಚನೆಯನ್ನು ನೀಡಿದೆ. ಅಲ್ಲದೆ ಕರಾವಳಿಯ ಕೆಲವು ಕಡೆ ಸಾಧಾರಣ ಮಳೆ ಆಗುವ ಸೂಚನೆಯನ್ನೂ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಲಕ್ಷಣಗಳು ಎದ್ದು ಕಾಣುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೇ 11ರ ವರೆಗೆ ಉತ್ತಮ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರಿನ ಹಲವು ಭಾಗಗಳಲ್ಲಿ ನಿನ್ನೆ ಮಧ್ಯಾಹ್ನ ಅಬ್ಬರಿಸಿದ್ದು, ಇಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣವಿದೆ. ಆದ್ದರಿಂದ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಉತ್ತರ ಒಳನಾಡಿನ ಬಹುತೇಕ ಕಡೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಎಲ್ಲಾ ಕಡೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡು ಹವಮಾನ ವರದಿ
ಅಲ್ಲದೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದು ಮಳೆ ಪಡೆಯುವ ಕರಾವಳಿಯ ಜಿಲ್ಲೆಗಳಿವು
ಹಾಗೆಯೆ ಮತ್ತೊಂದೆಡೆ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ. ಅಲ್ಲದೆ ಮುಂದಿನ ಮೇ 14ರವರೆಗೂ ಭಾರಿ ಮಳೆ ಆಗುವ ಸಾಧ್ಯೆತೆಯಿದೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ಸಂದೇಶವನ್ನೂ ನೀಡಿದೆ.
ಮೇ 8 ಹಾಗೂ 9ರಂದು ಮಂಡ್ಯ, ದೊಡ್ಡಬಳ್ಳಾಪುರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉಡುಪಿ, ಬೆಂಗಳೂರು ನಗರ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಕೋಲಾರದಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೇ 10ರಿಂದ 13ರವರೆಗೆ ಮಳೆ ಪಡೆಯುವ ಜಿಲ್ಲೆಗಳು ಮೇ 10ರಂದು ಬೆಣ್ಣೆನಗರಿ ದಾವಣಗೆರೆ, ಮಂಜಿನ ನಗರಿ ಕೊಡಗು ಜಿಲ್ಲೆಗಳಲ್ಲಿ ಮಾತ್ರ ಭಾರಿ ಮಳೆ ಆಗಲಿದ್ದು, ಮೇ 12, 13ರಂದು ಹಾಸನ, ಬಾಗಲಕೋಟೆ ದಕ್ಷಿಣ, ಮಂಡ್ಯ ದಕ್ಷಿಣ, ತುಮಕೂರು ದಕ್ಷಿಣ, ಮಂಡ್ಯ, ಚಾಮರಾಜನಗರದ ದಕ್ಷಿಣ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಮೈಸೂರು ಪಶ್ಚಿಮ ಭಾಗ ಹಾಗೂ ಬೆಳಗಾವಿ ದಕ್ಷಿಣ, ಹಾವೇರಿಯಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೆಯೆ ಮೇ 14ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿಯ ದಕ್ಷಿಣ, ಕೊಡಗು, ಹಾವೇರಿ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಹಾಸನ, ಸೇರಿದಂತೆ ಹಲವೆಡೆ ಧಾರಕಾರ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.












Click it and Unblock the Notifications