Karnataka Rain: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ- ಹವಾಮಾನ ಇಲಾಖೆ ಮುನ್ನೆಚ್ಚರಿಕೆ, ಮಾಹಿತಿ, ವಿವರ
ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ವರುಣನ ಅರ್ಭಟ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿಯೂ ಮಳೆ ಬರುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳು ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ಹಂಚಿಕೊಂಡಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಧಾರವಾಡ ಹಾಗೂ ಗದಗದಲ್ಲಿ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯ ನಿರೀಕ್ಷೆ ಇದೆ.

ಕರ್ನಾಟಕದಲ್ಲಿ ನಿನ್ನೆ ಮಳೆ ಸುರಿದ ಪ್ರದೇಶಗಳ ಅಂಕಿಅಂಶ
ದಕ್ಷಿಣ ಕನ್ನಡ: 116 ಮಿ.ಮೀ
ಚಿಕ್ಕಮಗಳೂರು: 115.5 ಮಿ.ಮೀ
ಶಿವಮೊಗ್ಗ: 113.5 ಮಿ.ಮೀ
ಉಡುಪಿ: 74.5 ಮಿ.ಮೀ
ಉತ್ತರ ಕನ್ನಡ: 60.5 ಮಿ.ಮೀ
ತುಮಕೂರು: 64 ಮಿ.ಮೀ
ಹಾಸನ: 60 ಮಿ.ಮೀ
ಕೊಡಗು: 45.5 ಮಿ.ಮೀ
ಹೆಚ್ಚು ಮಳೆ ಬಿದ್ದ ಸ್ಥಳಗಳು
ಬೆಳಾಲು, ದಕ್ಷಿಣ ಕನ್ನಡ: 116 ಮಿ.ಮೀ
ಬಂಕಲ್, ಚಿಕ್ಕಮಗಳೂರು: 115.5 ಮಿ.ಮೀ
ಸುಳಗೋಡು, ಶಿವಮೊಗ್ಗ: 113.5 ಮಿ.ಮೀ
ಧರ್ಮಸ್ಥಳ, ದಕ್ಷಿಣ ಕನ್ನಡ: 108 ಮಿ.ಮೀ
ಸೋಮೇಶ್ವರ, ದಕ್ಷಿಣ ಕನ್ನಡ: 107.5 ಮಿ.ಮೀ
ತ್ರಿಪುರ - 80 ಮಿ.ಮೀ
ಕಿರುಗುಂದ - 59 ಮಿ.ಮೀ
ಬಿದರಹಳ್ಳಿ - 49 ಮಿ.ಮೀ
ಫಲ್ಗುಣಿ - 44 ಮಿಮೀ
ಚಿನ್ನಿಗ - 42 ಮಿ.ಮೀ
ಬಾಳೂರು - 34 ಮಿ.ಮೀ
ಕ್ಯಾಮನಹಳ್ಳಿ - 33ಮಿ.ಮೀ
ಸಕಲೇಶಪುರ - 28 ಮಿ.ಮೀ

ಸೆಪ್ಟೆಂಬರ್ 17ರಂದು ಭಾರತದಾದ್ಯಂತ ಮಳೆ ವಿವರ
ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಪೂರ್ವ ರಾಜಸ್ಥಾನ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಐಎಂಡಿ ಹೇಳಿದೆ.

ಉತ್ತರಾಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸೌರಾಷ್ಟ್ರ ಮತ್ತು ಕಚ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಬಿರು ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮಧ್ಯ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಂಭವಿಸುವ ಮೂಲಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.












Click it and Unblock the Notifications