Rain Alert: ಕರಾವಳಿ ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ- ವರದಿ, ವಿವರ
ಬೆಂಗಳೂರು, ಸೆಪ್ಟೆಂಬರ್ 05: ಕರ್ನಾಟಕದಲ್ಲಿ ವಿವಿಧ ಪ್ರದೇಶಗಳಲ್ಲಿ ಮುಂದಿನ 10 ದಿನಗಳ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಸೆಪ್ಟೆಂಬರ್ 14ರ ವರೆಗೆ ಕರಾವಳಿ, ಮಲೆನಾಡು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ಗಣನೀಯ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಪ್ರದೇಶದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರ ಕರ್ನಾಟಕದ ಅಲ್ಲಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.
ಇಂದು ಬೆಳಿಗ್ಗೆ 8 ಗಂಟೆಯವರೆಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಆದ ಮಳೆ ಪ್ರಮಾಣ
ಕಲಬುರಗಿ: 78 ಮಿ.ಮೀ
ಬೀದರ್: 72 ಮಿ.ಮೀ
ಉಡುಪಿ: 53.5 ಮಿ.ಮೀ
ದಕ್ಷಿಣ ಕನ್ನಡ: 48 ಮಿ.ಮೀ
ರಾಯಚೂರು: 37 ಮಿ.ಮೀ
ಯಾದಗಿರಿ: 37 ಮಿ.ಮೀ
ವಿಜಯಪುರ: 29 ಮಿ.ಮೀ
ಬಾಗಲಕೋಟೆ: 28.5 ಮಿ.ಮೀ
ಬೆಂಗಳೂರು ಗ್ರಾಮಾಂತರ: 28 ಮಿ.ಮೀ
ಬಳ್ಳಾರಿ: 27.5 ಮಿ.ಮೀ
ಬೆಳಗಾವಿ: 27 ಮಿ.ಮೀ
ಕೊಡಗು: 20.5 ಮಿ.ಮೀ

ಟಾಪ್ 5 ಮಳೆ ಬಿದ್ದ ಸ್ಥಳಗಳು
ಹಸರಗುಂಡಗಿ, ಕಲಬುರಗಿ: 78 ಮಿ.ಮೀ
ಸಿಂದೋಳ, ಬೀದರ್: 72 ಮಿ.ಮೀ
ಚಾಂಗ್ಲರ್, ಬೀದರ್: 70 ಮಿ.ಮೀ
ಸೇಡಂ, ಕಲಬುರಗಿ: 69.4 ಮಿ.ಮೀ
ಬೀದರ್: 61 ಮಿ.ಮೀ
ಸೆಪ್ಟೆಂಬರ್ 05: ದೇಶದಲ್ಲಿ ಮಳೆ ಮುನ್ಸೂಚನೆ
ಒಡಿಶಾ, ವಿದರ್ಭ, ಛತ್ತೀಸ್‌ಗಢ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ ಮತ್ತು ಮಾಹೆಯ ಕೆಲವು ಭಾಗಗಳಲ್ಲಿ ಭಾರಿ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗಂಗಾನದಿ ಪಶ್ಚಿಮ ಬಂಗಾಳ, ಪೂರ್ವ ಮಧ್ಯಪ್ರದೇಶ, ಮರಾಠವಾಡ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗಂಗಾ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಪೂರ್ವ ಮಧ್ಯಪ್ರದೇಶ, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ತೆಲಂಗಾಣ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬಿಹಾರ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ ಮತ್ತು ಕರ್ನಾಟಕದ ಒಳಭಾಗದಲ್ಲಿ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆ ಬೀಳಬಹುದು.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಪೂರ್ವ ಉತ್ತರ ಪ್ರದೇಶ, ಪಂಜಾಬ್ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ, ಗುಜರಾತ್, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications