Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಮಳೆ- ವರದಿ, ವಿವರ
ಬೆಂಗಳೂರು, ಆಗಸ್ಟ್ 29: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಹೆರಗು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ, ಅಗತ್ತೂರು, ಪೆಂಜಹಳ್ಳಿ, ಚೌಡಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಐಎಂಡಿ ಹೇಳಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಗುಂಡಾಪುರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಬಹುದು ಎಂಬ ಮನ್ಸೂಚನೆ ಇದೆ.
ಚಾಮರಾಜನಗರ, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟಗಳ ಮೇಲೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದೇಶದ ಈ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮೇಲಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಪಂಜಾಬ್, ಹರಿಯಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಒಳ ಕರ್ನಾಟಕ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications