Rain Alert: ಮಳೆ ಆರ್ಭಟ ಹಿನ್ನೆಲೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ!
ಮಳೆ ಆರ್ಭಟ ಮಿತಿಮೀರಿ ಹೋಗಿದ್ದು, ಅದರಲ್ಲೂ ಕರ್ನಾಟಕದ ಮಲೆನಾಡು & ಕರಾವಳಿ ಜಿಲ್ಲೆಗಳಲ್ಲಿ ಭೂಮಿಯೇ ಕೊಚ್ಚಿಕೊಂಡು ಹೋಗುವಂತೆ ಮಳೆ ಬರುತ್ತಿದೆ. ಪರಿಣಾಮ ಭಾರಿ ನಷ್ಟ ಉಂಟಾಗುತ್ತಿದ್ದು, ಜನರು ಕೂಡ ಜೀವ ಭಯದಲ್ಲೇ ದಿನ ದೂಡುವ ಪರಿಸ್ಥಿತಿ ಇದೀಗ ಎದುರಾಗಿದೆ. ಪರಿಸ್ಥಿತಿ ಹೀಗಿದ್ದಾಗ ಶಾಲಾ & ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ & ಕಾಲೇಜ್ ಬಂದ್ ಆಗಲಿವೆ? ಮುಂದೆ ಓದಿ.
ಕರ್ನಾಟಕದಲ್ಲಿ ಭಾರಿ ಮಳೆಯ ಪರಿಣಾಮ, ಡ್ಯಾಂಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೆಲ ತಿಂಗಳ ಹಿಂದೆ ಪೂರ್ತಿ ಒಣಗಿ ಹೋಗಿದ್ದ ಡ್ಯಾಂಗಳಲ್ಲಿ ಈಗ ಭಾರಿ ನೀರು ತುಂಬಿಕೊಳ್ಳುತ್ತಿದ್ದು, ಅನ್ನದಾತ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅಷ್ಟೇ ಅಲ್ಲ ಸಿಟಿ ಮಂದಿಗೆ ಕೂಡ ಇದೀಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ಈಗ ಕೆಆರ್‌ಎಸ್, ಕಬಿನಿ, ಹೇಮಾವತಿ, ತುಂಗಾ, ಭದ್ರಾ, ಹಾರಂಗಿ ಡ್ಯಾಂ ಸೇರಿದಂತೆ ಬಹುತೇಕ ಜಲಾಶಯಗಳು ಭರ್ತಿ ಆಗುತ್ತಿವೆ. ಹೀಗಿದ್ದಾಗ ಮಲೆನಾಡು & ಕರಾವಳಿ ಭಾಗದಲ್ಲಿ ಜಲಪ್ರಳಯ ಸೃಷ್ಟಿ ಆಗ್ತಿದೆ!

ಶಾಲಾ & ಕಾಲೇಜುಗಳಿಗೆ ರಜೆ!
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ & ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆ ಈಗ ಮಳೆಯು ಅಬ್ಬರಿಸುತ್ತಿದೆ. ಅದ್ರಲ್ಲೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮುಂಗಾರು ಮಳೆಯು ಬೀಳುತ್ತಿರುವ ಕಾರಣ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಸ್ಥಿತಿಗೆ ತಲುಪಿದೆ. ಪರಿಸ್ಥಿತಿ ಹೀಗೆ ಕೈಮೀರಿ ಹೋದ ಸಮಯದಲ್ಲೇ ವಿದ್ಯಾರ್ಥಿಗಳ ಹಿತದೃಷ್ಟಿ ಹಿನ್ನೆಲೆ ಶಾಲಾ & ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ & ದಕ್ಷಿಣ ಕನ್ನಡ..
ಈಗಿರುವ ಮಾಹಿತಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಜುಲೈ 9 ರಂದು ಭರ್ಜರಿ ಮಳೆ ಬೀಳಲಿರುವ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ತರಗತಿಗಳು ಸಾಮಾನ್ಯ ರೀತಿಯಲ್ಲಿ ನಡೆಯಲಿವೆ ಎಂದು ತಿಳಿಸಲಾಗಿದೆ. ಇದರ ಜೊತೆಗೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಹಲವು ತಾಲೂಕುಗಳಲ್ಲಿ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ.
ಮಳೆಯಿಂದಾಗಿ ಭಾರಿ ಸಮಸ್ಯೆ
ಮುಂಗಾರು ಮಳೆ ಅಂದ್ರೆ ಕರ್ನಾಟಕ & ಕನ್ನಡಿಗರ ಪಾಲಿಗೆ ಜೀವಕಳೆ ಇದ್ದಂತೆ. ಯಾಕಂದ್ರೆ ಮುಂಗಾರು ಮಳೆ ಇಲ್ಲದೆ ಬದುಕೇ ಇಲ್ಲ. ಮುಂಗಾರು ಮಳೆ ಬರದೇ ಇದ್ದರೆ ನೀರು ಖಾಲಿ ಖಾಲಿ. ಹೀಗಿದ್ದಾಗ 2024ರ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕರ್ನಾಟಕದ ಡ್ಯಾಂಗಳಲ್ಲಿ ಭಾರಿ ಪ್ರಮಾಣದ ನೀರು ಸಂಗ್ರಹ ಆಗುತ್ತಿದೆ. ಅದರಲ್ಲೂ ಕರ್ನಾಟಕದ ಕೆಆರ್‌ಎಸ್ ಸೇರಿ, ಕಬಿನಿ, ಹೇಮಾವತಿ, ತುಂಗಾ, ಭದ್ರಾ & ಹಾರಂಗಿ ಡ್ಯಾಂಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಬರುತ್ತಿದೆ. ಆದರೆ ಇದೇ ಸಮಯದಲ್ಲಿ ಭಾರಿ ಮಳೆಯಿಂದ ಸಾಕಷ್ಟು ಸಮಸ್ಯೆ ಕೂಡ ಈಗ ಎದುರಾಗುತ್ತಿದೆ.
ಕೆಆರ್‌ಎಸ್ ಜಲಾಶಯ ಫುಲ್?
ಕೆಆರ್‌ಎಸ್ ಜಲಾಶಯದಲ್ಲಿ ಒಟ್ಟು 49.45 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಇದ್ದು, ಈಗ 24.42 ಅಡಿ ನೀರು ಇದೆ. ಆದ್ರೆ ಕಳೆದ ವರ್ಷ ಇದೇ ಸಮಯಕ್ಕೆ ಕೇವಲ 10.57 ಟಿಎಂಸಿ ಅಡಿ ನೀರು ಇತ್ತು. ಸದ್ಯ 11,027 ಕ್ಯುಸೆಕ್ ನೀರು ಕೆಆರ್‌ಎಸ್ ಡ್ಯಾಂಗೆ ಹರಿದು ಬರ್ತಿದೆ. ಹಾಗೇ ಮುಂದಿನ ವಾರ ಕೂಡ ಭರ್ಜರಿ ಮಳೆಯ ನಿರೀಕ್ಷೆ ಇದ್ದು, ಈ ಡ್ಯಾಂಗೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. ಕಾವೇರಿ ನದಿಗೆ ಕಟ್ಟಿರುವ ಪ್ರಮುಖ ಡ್ಯಾಂಗಳ ಪೈಕಿ ಕಬಿನಿ ಕೂಡ ಒಂದಾಗಿದೆ. ಈ ಜಲಾಶಯ ಚಿಕ್ಕದಾಗಿದ್ದರೂ ಕಾವೇರಿ ಕೊಳ್ಳದಲ್ಲಿ ದೊಡ್ಡ ಪರಿಣಾಮ ಬೀರುತ್ತದೆ. 19.52 ಟಿಎಂಸಿ ಅಡಿ ನೀರನ್ನು ಕಬಿನಿ ಜಲಾಶಯದಲ್ಲಿ ಸಂಗ್ರಹ ಮಾಡಬಹುದು. ಇದೀಗ ಕಬಿನಿ ಡ್ಯಾಂನಲ್ಲಿ 17.98 ಟಿಎಂಸಿ ಅಡಿ ನೀರು ಸಂಗ್ರಹ ಇದೆ. 5,039 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಬಿನಿ ಡ್ಯಾಂ ಭಾಗಶಃ ಭರ್ತಿ ಆಗಿದೆ.












Click it and Unblock the Notifications