Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಮಳೆ- ಬೆಂಗಳೂರಿನ ಕತೆ ಏನು? ಅಂಕಿಅಂಶ, ವರದಿ, ವಿವರ

ಬೆಂಗಳೂರು, ಸೆಪ್ಟೆಂಬರ್‌ 02: ಕರ್ನಾಟಕದಲ್ಲಿ ಶನಿವಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮನ್ಸೂಚನೆಯನ್ನು ಐಎಂಡಿ ನೀಡಿದೆ.

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

Rain alert: thunderstorms likely over North and south Karnataka- What about Bengaluru?

ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣದಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಶುಕ್ರವಾರ ಭಾರೀ ಮಳೆಯಾದ ಪ್ರದೇಶಗಳು

ಧನಗೂರ್ - 121 ಮಿಮೀ
ತಳಗವಾಡಿ - 117 ಮಿ.ಮೀ
ನೆಲಮಾಕನಹಳ್ಳಿ - 110 ಮಿ.ಮೀ
ಯತ್ತಂಬಾಡಿ - 105 ಮಿ.ಮೀ
ಚಿಕ್ಕರಸಿನಕೆರೆ- 94 ಮಿ.ಮೀ
ಕೆ.ಶೆಟಿಹಳ್ಳಿ - 85 ಮಿ.ಮೀ
ಮಳವಳ್ಳಿ - 83 ಮಿ.ಮೀ
ಗೌಡಗೆರೆ- 77 ಮಿ.ಮೀ
ಮಳವಳ್ಳಿ- 64 ಮಿ.ಮೀ
ಟಿ.ಕೆ.ಹಳ್ಳಿ - 52 ಮಿ.ಮೀ

ದೇಶದ ಹಲವು ಭಾಗಗಳಲ್ಲಿ ಇಂದು ಮಳೆ ಮುನ್ಸೂಚನೆ

ದೇಶದ ಹಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕವಾದ ಮಳೆಯು ಸುರಿಯುವ ಸಾಧ್ಯತೆ ಇದೆ.

Rain alert: thunderstorms likely over North and south Karnataka- What about Bengaluru?

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೇರಳ, ಅರುಣಾಚಲ ಪ್ರದೇಶ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಜಮ್ಮು- ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ ಮತ್ತು ಗೋವಾದಾದ್ಯಂತ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು.

Rain alert: thunderstorms likely over North and south Karnataka- What about Bengaluru?

ಭಾನುವಾರ ಮಳೆ ಮುನ್ಸೂಚನೆ

ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಲಡಾಖ್, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+