Karnataka Weather: ಇಂದಿನಿಂದ ಎರಡು ದಿನ ವ್ಯಾಪಕ ಮಳೆ: ಯಾವ ಜಿಲ್ಲೆಗಳಲ್ಲಿ ತಿಳಿಯಿರಿ
ಶುಕ್ರವಾರದಿಂದ ಭಾನುವಾರದವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಶುಕ್ರವಾರ) ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿದೆ.
ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಹೇಳಿದೆ.

ಶನಿವಾರ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಬಳ್ಳಾರಿ, ಬೆಳಗಾವಿ, ವಿಜಯಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಡಿಸೆಂಬರ್ 10ರಂದು ಭಾನುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು. ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹೇಳಿದೆ.
ಡಿಸೆಂಬರ್ 11 ಮತ್ತು 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಡಿಸೆಂಬರ್ 13ರ ಬಳಿಕ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಲಿದ್ದು ಶುಷ್ಕ ವಾತಾವರಣ ಇರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆ ಸಾಧ್ಯತೆ ಕಡಿಮೆ ಇರಲಿದೆ. ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾದರೂ ನಗರದ ಬಹುತೇಕ ಭಾಗಗಳಲ್ಲಿ ಶುಷ್ಕ ವಾತಾವರಣ ಇರಲಿದೆ.












Click it and Unblock the Notifications