ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕಾಲಿಕ ಮಳೆ; ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸೂಚನೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಎದುರಿಸಲು ಹಲವು ಸೂಚನೆಗಳನ್ನು ನೀಡಿದ್ದಾರೆ.

ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ದಿನಾಂಕ 17/10/2022ರಂದು ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

Bengaluru Rains: ಬೆಂಗಳೂರಿನಲ್ಲಿ ಈ ವರ್ಷ 1,795.5 ಮಿ.ಮೀ ದಾಖಲೆ ಮಳೆ!Bengaluru Rains: ಬೆಂಗಳೂರಿನಲ್ಲಿ ಈ ವರ್ಷ 1,795.5 ಮಿ.ಮೀ ದಾಖಲೆ ಮಳೆ!

ಈ ಸಭೆಯಲ್ಲಿ ತೀರ್ಮಾನಿಸಿದಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತವು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ನಿರ್ದೇಶನ ನೀಡಿದ್ದಾರೆ.

Infographics; ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಮಳೆ? Infographics; ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಮಳೆ?

Rain And Flood Karnataka Govt Directions To DCs

ಜಿಲ್ಲಾಡಳಿತಕ್ಕೆ ನಿರ್ದೇಶನಗಳು

* ಮನೆ ಹಾನಿ ಪರಿಹಾರವನ್ನು ಪಾವತಿಸಲು 2-8-2022ರ ಸರ್ಕಾರಿ ಪತ್ರದಲ್ಲಿ ತಿಳಿಸಿರುವುದನ್ನು ಮಾರ್ಪಡಿಸಿ, 2019, 2020 ಮತ್ತು 2021ನೇ ಸಾಲಿನಲ್ಲಿ ಭಾಗಶಃ ಹಾನಿಯಾದ 'ಸಿ' ವರ್ಗದಲ್ಲಿ ರೂ. 50,000ದಂತೆ ಮನೆ ಪರಿಹಾರ ಪಡೆದಿರುವ ಮನೆಗಳು ಪುನಃ 2022ನೇ ಸಾಲಿನಲ್ಲಿ ಜಂಟಿ ಸಮೀಕ್ಷೆ ಅನುಸಾರ ಅತಿವೃಷ್ಟಿಯಿಂದ 'ಎ' 'ಬಿ' ಮತ್ತು 'ಸಿ' ವರ್ಗದಲ್ಲಿ ಹಾನಿಯಾದಲ್ಲಿ ಪರಿಹಾರ ಪಾವತಿಸುವುದು.

ಮಳೆ ಅವಾಂತರ: ಬಳ್ಳಾರಿಯಲ್ಲಿ ವ್ಯಕ್ತಿ ಸಾವು, ಕಲಬುರಗಿಯಲ್ಲಿ 17 ಜಾನುವಾರುಗಳು ಸಾವು ಮಳೆ ಅವಾಂತರ: ಬಳ್ಳಾರಿಯಲ್ಲಿ ವ್ಯಕ್ತಿ ಸಾವು, ಕಲಬುರಗಿಯಲ್ಲಿ 17 ಜಾನುವಾರುಗಳು ಸಾವು

* ಅತಿವೃಷ್ಟಿಯಿಂದ ರಾಜ್ಯದ ಬಹುತೇಕ ಕೆರೆಗಳು ತುಂಬಿ ಹರಿಯುತ್ತಿದ್ದು, ಇದರಿಂದ ಕೃಷಿ ಭೂಮಿಯಲ್ಲಿ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿರುವುದು ಕಂಡು ಬಂದಿದೆ. ಇಂತಹ ಪ್ರಕರಣಗಳಿಗೆ ಕೇಂದ್ರ ಸರ್ಕಾರದ SDRF/ NDRF ಮಾರ್ಗಸೂಚಿಯನ್ವಯ ಪರಿಹಾರ ಪಾವತಿಸಲು ಅವಕಾಶವಿರುವುದರಿಂದ, ಜಿಲ್ಲಾಧಿಕಾರಿಗಳು ಇಂತಹ ಪ್ರಕರಣಗಳನ್ನು ಕೂಲಕಂಷವಾಗಿ ಪರಿಶೀಲಿಸಿ ಪರಿಹಾರ ಪಾವತಿಸುವುದು.

* ಬೆಳೆ ಹಾನಿ ಇನ್‌ಪುಟ್ ಸಬ್ಸಿಡಿಯನ್ನು ಶೀಘ್ರವಾಗಿ ತಂತ್ರಾಂಶದಲ್ಲಿ ನಮೂದಿಸುವ ಕಾರ್ಯವನ್ನು ತ್ಯರಿತಗೊಳಿಸುವುದು.

Rain And Flood Karnataka Govt Directions To DCs

* 2019, 2020 ಮತ್ತು 2021ನೇ ಸಾಲಿನಲ್ಲಿ'ಎ' ಅಥವಾ 'ಬಿ' ವರ್ಗದಲ್ಲಿ ಹಾನಿಯಾದ ಮನೆಗಳು ಈವರೆಗೂ ಮನೆ ನಿರ್ಮಾಣ ಕಾರ್ಯ ಪ್ರಾರಂಭವಾಗದಂತಹ ಮನೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ರದ್ದುಗೊಳಿಸುವುದು.

* ಪ್ರಾರಂಭವಾಗಿರುವ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮನೆ ಮಾಲೀಕರಿಗೆ ನೋಟಿಸ್‌ಗಳನ್ನು ನೀಡುವುದು.

* ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿರುವುದರಿಂದ, ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣೆಯನ್ನು ಬಲಗೊಳಿಸಬೇಕಾಗಿದೆ. ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರವು ರಾಜ್ಯ ತುರ್ತು ನಿರ್ವಹಣಾ ಕೇಂದ್ರದೊಂದಿಗೆ ನಿರಂತರವಾಗಿ ಸಂಪರ್ಕದೊಂದಿಗೆ ಕಾರ್ಯ ನಿರ್ವಹಿಸುವುದು. ಪ್ರವಾಹ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಕುರಿತು ನಿಗಾ ಇಡಲು ವಿಪತ್ತು ನಿರ್ವಹಣಾ ಟಾಸ್ಕ್‌ಫೋರ್ಸ್‌ ಅನ್ನು ಜಿಲ್ಲಾ ಮಟ್ಟದಲ್ಲಿ ರಚಿಸುವುದು.

* ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿರುವುದರಿಂದ, ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣೆಯನ್ನು ಬಲಗೊಳಿಸಬೇಕಾಗಿದೆ. ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರವು ರಾಜ್ಯ ತುರ್ತು ನಿರ್ವಹಣಾ ಕೇಂದ್ರದೊಂದಿಗೆ ನಿರಂತರವಾಗಿ ಸಂಪರ್ಕದೊಂದಿಗೆ ಕಾರ್ಯ ನಿರ್ವಹಿಸುವುದು. ಪ್ರವಾಹ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಕುರಿತು ನಿಗಾ ಇಡಲು ವಿಪತ್ತು ನಿರ್ವಹಣಾ ಟಾಸ್ಕ್‌ಫೋರ್ಸ್‌ ಅನ್ನು ಜಿಲ್ಲಾ ಮಟ್ಟದಲ್ಲಿ ರಚಿಸುವುದು.

* ಇತ್ತೀಚೆಗೆ ಕೆರೆಗಳು ಶೀಘ್ರವಾಗಿ ತುಂಬುತ್ತಿರುವುದರಿಂದ ನೀರಿನ ರಭಸ ತಡೆದುಕೊಳ್ಳಲು ಸಾಧ್ಯವಾಗದ ಶಿಥಿಲಗೊಂಡ ಕರೆಗಳು ಒಡೆಯುತ್ತಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗುತ್ತಿರುವುದು ಕಂಡುಬಂದಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಶಿಥಿಲಗೊಂಡ ಕೆರೆಗಳ ಗೋಡೆಗಳನ್ನು ಬಲಗೊಳಿಸಬೇಕು.

* ಪ್ರತಿ ಬಾರಿ ಪ್ರವಾಹ ಎದುರಾಗುತ್ತಿರುವ ಜಲಾನಯನ ಗ್ರಾಮಗಳನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳುವುದು.

* ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿರುವ ಸಿಬ್ಬಂದಿಗೆ ವಿಪತ್ತು ನಿರ್ವಹಣೆಯ ತರಬೇತಿಯನ್ನು ನೀಡಿ ಇವರ ಸಾಮರ್ಥ್ಯವನ್ನು ಬಲಪಡಿಸುವುದು. ಪ್ರವಾಹ ಪರಿಸ್ಥಿತಿಯನ್ನು ಮೊಟ್ಟಮೊದಲು ಸಮುದಾಯ ಮಟ್ಟದ ಜನರು ಎದುರಿಸುವುದರಿಂದ, ಗ್ರಾಮ ಮಟ್ಟದಲ್ಲಿರುವ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಗುರುತಿಸಿ ವಿಪತ್ತು ನಿರ್ವಹಣೆ ತರಬೇತಿಯನ್ನು ನೀಡಿ ಇವರ ಸೇವೆಯನ್ನು ಉಪಯೋಗಿಸಿಕೊಳ್ಳುವುದು.

* ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿಯೂ ಸಹ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮೇಲ್ಕಂಡ ಪ್ರವಾಹ ಪರಿಹಾರ ಕಾರ್ಯಗಳನ್ನು ಜಿಲ್ಲಾಡಳಿತವು ಆದ್ಯತೆಯ ಮೇರೆಗೆ ಕೈಗೊಂಡು, ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

English summary
Rain and flood Karnataka government directions to deputy commissioner for take relief works.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X