ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ ಬಿಡಿ, ಪ್ರವಾಹ ಪರಿಸ್ಥಿತಿ ನೋಡಿ; ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15 : "ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ರೈತರ ಬೆಳೆಗಳು ನೀರಿನಲ್ಲಿ ಮುಳುಗಿವೆ. ಮಳೆ, ಪ್ರವಾಹದಿಂದಾಗಿ ಅಪಾರವಾದ ಹಾನಿಯಾಗಿದೆ.

ಕಲಬುರಗಿ; ಮಳೆ, ಪ್ರವಾಹ, ಸಹಾಯವಾಣಿ ಸಂಖ್ಯೆಗಳು ಕಲಬುರಗಿ; ಮಳೆ, ಪ್ರವಾಹ, ಸಹಾಯವಾಣಿ ಸಂಖ್ಯೆಗಳು

ಗುರುವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಿದ್ದಾರೆ. ಸರ್ಕಾರದ ಕೆಲಸಗಳನ್ನು ನೆನಪು ಮಾಡಿಕೊಟ್ಟಿದ್ದಾರೆ.

ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಗಾಳಿ ಸಹಿತ ಧಾರಾಕಾರ ಮಳೆ ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಗಾಳಿ ಸಹಿತ ಧಾರಾಕಾರ ಮಳೆ

ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಹಳ್ಳ, ನದಿ, ನಾಲೆಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ, ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ಕಿ. ಮೀ. ರಸ್ತೆಗೆ ಹಾನಿಯಾಗಿದೆ. ಸೇತುವೆಗಳು ಮುಳುಗಿವೆ.

ಆರ್ಭಟಿಸುತ್ತಿರುವ ವರುಣ; ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿಆರ್ಭಟಿಸುತ್ತಿರುವ ವರುಣ; ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ

ಹೊಣೆಗಾರಿಕೆ ಪ್ರದರ್ಶನ ಮಾಡಿ

ಹೊಣೆಗಾರಿಕೆ ಪ್ರದರ್ಶನ ಮಾಡಿ

"ಕೋವಿಡ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ" ಎಂದು ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ್ದಾರೆ

ಸಂಕಷ್ಟಕ್ಕೆ ಸಿಲುಕಿದ್ದಾರೆ

"ಸತತ ಎರಡು ವರ್ಷಗಳ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು" ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಚಿವರನ್ನು ತಕ್ಷಣ ನಿಯೋಜಿಸಿ

ಸಚಿವರನ್ನು ತಕ್ಷಣ ನಿಯೋಜಿಸಿ

"ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು" ಎಂದು ಆಗ್ರಹಿಸಿದ್ದಾರೆ.

Recommended Video

Kusuma ಗೆ ದೊಡ್ಡ Shock | Oneindia Kannada
ವಿವಿಧ ಜಿಲ್ಲೆಗಳಲ್ಲಿ ಮಳೆ

ವಿವಿಧ ಜಿಲ್ಲೆಗಳಲ್ಲಿ ಮಳೆ

ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರೈತರ ಬೆಳೆಗಳು ನೀರಿನಲ್ಲಿ ಮುಳುಗಿವೆ. ಮಳೆ, ಪ್ರವಾಹದಿಂದಾಗಿ ಅಪಾರವಾದ ಹಾನಿಯಾಗಿದೆ.

English summary
Kalaburagi, Bidar, Raichur and other districts of Karnataka witnessed for heavy rain and flood due to cyclone in bay of Bengal. Former CM H. D. Kumaraswamy urged the government to take care of people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X