Karnataka Rains : ಮುಂದಿನ 4ರಿಂದ 5 ದಿನಗಳಲ್ಲಿ ಕರ್ನಾಟಕ ಸೇರಿ ಹಲವೆಡೆ ಮಳೆ: IMD
ಬೆಂಗಳೂರು, ಡಿಸೆಂಬರ್ 2: ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಅದು ಕ್ರಮೇಣ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಸುರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪೂರ್ವದ ಅಲೆಯಿಂದಾಗಿ ಮುಂದಿನ 4-5 ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪತ್ರಿಕಾ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 4ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಚಲನೆ ಕಂಡು ಬರುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಡಿಸೆಂಬರ್ 5ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ಚಂಡಮಾರುತವು ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಕ್ಕೆ ಈದು ಕಾರಣವಾಗಲಿದೆ. ಇದರ ನಂತರ, ಸೈಕ್ಲೋನಿಕ್ ಪರಿಚಲನೆಯು ಪಶ್ಚಿಮ ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 8 ರಂದು ತಮಿಳುನಾಡು ಪುದುಚೇರಿ ಕರಾವಳಿಯ ಬಳಿ ತಲುಪುತ್ತದೆ.

ಕನಿಷ್ಠ ತಾಪಮಾನ ಮತ್ತು ಹವಾಮಾನ ಮುನ್ಸೂಚನೆಯ ಬಗ್ಗೆ ಐಎಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಮುಂದಿನ 5 ದಿನಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಾಗಲ್ಲ. ಮುಂದಿನ 2-3 ದಿನಗಳವರೆಗೆ 24 ಗಂಟೆಗಳ ನಂತರ ಮಹಾರಾಷ್ಟ್ರದಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.












Click it and Unblock the Notifications