ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಹಾನಿ: ಸಚಿವ ಆರ್‌. ಅಶೋಕ್ ಮಾಹಿತಿ

|
Google Oneindia Kannada News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಾತ್ರಿ ಇಡೀ ಸುರಿದ ತೀವ್ರ ಮಳೆಯಿಂದಾಗಿ ಜನರಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಗಳಲ್ಲಿ 3 ಜನರು ಸಾವನ್ನಪ್ಪಿದ್ದಾರೆ. ರಾಮನಗರ ಎರಡು, ಬಳ್ಳಾರಿ ಒಂದು ಸಾವು, ಮೂರು ಜನರಿಗೆ ಗಾಯ ಹಾಗೂ ಮೂರು ಜನ ಕಾಣೆಯಾಗಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಮಳೆಯ ಅವಾಂತರ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 820 ಮಿ. ಮಿ ಮಳೆಯಾಗಿದೆ. 3000 ಜನರು ಸಂತ್ರಸ್ತರಾಗಿದ್ದು 875 ಜನರನ್ನು ರಕ್ಷಿಸಲಾಗಿದೆ. 7 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ ಎಂದು ಸಚಿವ ಆರ್‌. ಅಶೋಕ್ ಮಾಹಿತಿ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ 3 ದಿನಗಳಲ್ಲಿ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ರಾಮನಗರ, ಚಾಮರಾಜನಗರ, ಮಂಡ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಂಬತ್ತು ಮಿ.ಮೀ ಮಳೆ ಆಗಿದೆ. ಕಳೆದ 24 ಗಂಟೆಗಳಲ್ಲಿ ಇಪ್ಪತ್ತು ಗ್ರಾಮಗಳಿಗೆ ತೊಂದರೆಯಾಗಿದೆ.

ಜೂನ್ ಒಂದರಿಂದ ಈವರೆಗೂ 258 ಪ್ರಾಣಿಗಳು ಸಾವನ್ನಪ್ಪಿವೆ. 266 ಸಣ್ಣ ಪ್ರಾಣಿಗಳು ಸಾವನ್ನಪ್ಪಿವೆ. 70 ಒಂದೇ ದಿನ ಪ್ರಾಣಿಗಳು ಸಾವನ್ನಪ್ಪಿವೆ. ಜೂನ್ ಒಂದರಿಂದ ಈವರೆಗೂ 187 ಗ್ರಾಮಗಳನ್ನು ತೊಂದರೆಗೀಡು ಮಾಡಿದೆ. ಕಳೆದ 24 ಗಂಟೆಗಳಲ್ಲಿ ಮೂರು ಸಾವಿರ ಜನಕ್ಕೆ ತೊಂದರೆಯಾಗಿದೆ.

Rain damage in many districts of Karnataka: Minister R. Ashok information

ರಾಮನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆನೀರು ನದಿಯಂತೆ ಹರಿಯುತ್ತಿದೆ. ಇದರಿಂದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಾಜ್ಯದಾದ್ಯಂತ ಮುಂದಿನ 3 ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಹೆದ್ದಾರಿಗಳು ಜಲಾವೃತಗೊಂಡಿರುವುದರಿಂದ ರಾಜ್ಯದ ಶಾಲಾ-ಕಾಲೇಜುಗಳಿಗೆ ನಿನ್ನೆ ರಜೆ ಘೋಷಿಸಲಾಗಿತ್ತು.

Rain damage in many districts of Karnataka: Minister R. Ashok information

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ 3 ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ.2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

English summary
The life of the people has been disrupted due to the heavy rain that fell throughout the night in many districts of Karnataka. Minister R Ashok has given information about rain damage in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X