ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಮಳೆ; ಶಾಲೆಗಳಿಗೆ ರಜೆ ನೀಡುವ ಹೊಣೆ ಡಿಸಿಗಳಿಗೆ

|
Google Oneindia Kannada News

ಬೆಂಗಳೂರು, ನವೆಂಬರ್ 18; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕೋವಿಡ್ ಪರಿಸ್ಥಿತಿ ಬಳಿಕ ಶಾಲೆಗಳು ಆರಂಭವಾಗಿವೆ. ಮಕ್ಕಳು ಮಳೆಯಲ್ಲಿಯೇ ಶಾಲೆಗೆ ಆಗಮಿಸುತ್ತಿದ್ದಾರೆ.

ಮಳೆ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಕುರಿತು ಗುರುವಾರ ಆದೇಶ ಹೊರಡಿಸಿದೆ. ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದಾವಣಗೆರೆಯಲ್ಲಿ ಮಳೆ; ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು ದಾವಣಗೆರೆಯಲ್ಲಿ ಮಳೆ; ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು

2021-22ನೇ ಸಾಲಿನ ಪೂರ್ವ ಪ್ರಾಥಮಿಕ ಹಾಗೂ 1 ರಿಂದ 10ನೇ ತರಗತಿ ಎಲ್ಲಾ ಶಾಲೆಗಳನ್ನು ಕೋವಿಡ್ ನಂತರ ಪಾರಂಭಿಸಲಾಗಿದೆ. ಶಾಲೆಗಳುನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತವೆ ಎಂದು ತಿಳಿಸಲಾಗಿದೆ.

 ಮೈಸೂರು ಜನರ ನಿದ್ದೆಗೆಡಿಸಿದ ಅಕಾಲಿಕ ಮಳೆ ಮೈಸೂರು ಜನರ ನಿದ್ದೆಗೆಡಿಸಿದ ಅಕಾಲಿಕ ಮಳೆ

Rain Education Dept Directs District Administrations To Declaring Holiday To schools

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಪ್ರಯುಕ್ತ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆಯಾಗಬಹುದಾಗಿರುತ್ತದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಕ್ರಮ ಕೈಗೊಳ್ಳುವುದು ಎಂದು ಸೂಚಿಸಲಾಗಿದೆ.

ದಕ್ಷಿಣ ಕನ್ನಡದ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ ದಕ್ಷಿಣ ಕನ್ನಡದ ವಿಶೇಷ ಶಾಲೆ; ಹಸಿರ ಬಳ್ಳಿಯೇ ಮೇಲ್ಛಾವಣಿ

ರಜಾ ಘೋಷಣೆ ಮಾಡಿದ ದಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲು ತಿಳಿಸಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ರಜೆ ಘೋಷಣೆ ಮಾಡಿದ ಜಿಲ್ಲಾಡಳಿತ; ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ವಿದ್ಯಾರ್ಥಿಗಳು ಶಾಲೆಗೆ ಆಗಮಿಸಲು ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ನವೆಂಬರ್ 19 ಮತ್ತು 20ರಂದು 2 ದಿನಗಳ ಅವಧಿಗೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸುವಂತೆ ಮೌಖಿಕವಾಗಿ ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನವೆಂಬರ್ 19 ಮತ್ತು 20ರಂದು 2 ದಿನಗಳ ಅವಧಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗ್ಗೆ 8.30ರ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಭೆ ಕರೆದ ಮುಖ್ಯಮಂತ್ರಿಗಳು; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಗುರುವಾರ ಬೆಳಗ್ಗೆ ಆರಂಭವಾದ ಜಿಟಿ-ಜಿಟಿ ಮಳೆ ನಿಂತಿಲ್ಲ. ನವೆಂಬರ್ 23ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಅಕಾಲಿಕ ಮಳೆಯಿಂದಾಗಿ ರೈತರು ಕಂಗಲಾಗಿದ್ದಾರೆ. ಅಡಕೆ, ಕಾಫಿ, ಮೆಣಸು, ರಾಗಿ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದೆ.

Recommended Video

600 ವರ್ಷಗಳ ನಂತರ ನಾಳೆ ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ | Oneindia Kannada

ಹಾಸನ ಜಿಲ್ಲೆಯಲ್ಲಿ ಮಳೆಯಿಂದ ಹಾಳಾದ ಕಾಫಿ ಬೆಳಗಾರರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳೆಹಾನಿ ಸಮೀಕ್ಷೆಗೆ ಕ್ರಮ ಕೈಗೊಳ್ಳುವಂತೆ ರೈತರಿಗೆ ಪರಿಹಾರ ಒದಗಿಸುವಂತೆ ಕಾಫಿ ಮಂಡಳಿಯ ಕಾರ್ಯದರ್ಶಿ ಜಗದೀಶ್ ಸೂಚಿಸಿದ್ದಾರೆ.

English summary
Karnataka education department directed district administrations to decide on declaring holiday to schools due to rains in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X