ಸಾಂಕ್ರಾಮಿಕ ರೋಗಗಳು ಹರಡುವಿಕೆ ತಡೆಗೆ ಆರೋಗ್ಯ ಇಲಾಖೆಯ ಮಾರ್ಗಸೂಚಿ
ಬೆಂಗಳೂರು, ಸೆ.8: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬೆಂಗಳೂರು ಸಹಿತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹ ಇನ್ನೂ ಕೆಲವೆಡೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಯಾವ ರೀತಿ ಸನ್ನದ್ಧವಾಗಿರಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ನೀಡಿದೆ.
* ಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ಆರೋಗ್ಯ ಕೇಂದ್ರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ಲಭ್ಯವಿರಬೇಕು.
* ಕ್ರಿಯಾ ಯೋಜನೆಯಂತೆ ಅಗತ್ಯ ಮಾನವ ಸಂಪನ್ಮೂಲ, ಟೆಸ್ಟಿಂಗ್ ಕಿಟ್, ಔಷಧಗಳು, ರಸಾಯನಿಕ, ಉಪಕರಣಗಳು ಹಾಗೂ ಪ್ರಮಾಣಿತ ಕಾರ್ಯಾಚರಣ ವಿಧಾನಗಳನ್ನು ಅಗತ್ಯ ಪ್ರಮಾಣದಲ್ಲಿ ಲಭ್ಯವಿಡಬೇಕು.

* ಸಾಂಕ್ರಾಮಿಕ ರೋಗಗಳ ಚಿಕಿತ್ಸೆ ಮತ್ತು ನಿರ್ವಹಣೆಯನ್ನು ಕೇಂದ್ರ ಸರ್ಕಾರದ ಎನ್‌ಸಿಡಿಸಿ ಹಾಗೂ ಸಿವಿಬಿಡಿಸಿ ಸೂಚಿಸಿರುವ ನಿಯಮಗಳ ಪ್ರಕಾರ ನಡೆಸಬೇಕು.
*ಯಾವುದೇ ರೀತಿಯ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತ್ವರಿತ ಪ್ರತಿಕ್ರಿಯಾ ತಂಡಗಳು ಅಗತ್ಯ , ಔಷಧ, ಸಲಕರಣೆಗಳು ಹಾಗೂ ವಾಹನ ಸೌಲಭ್ಯದೊಂದಿಗೆ ಸನ್ನದ್ಧವಾಗಿರಬೇಕು.
* ಪ್ರವಾಹ ಪೀಡಿತ ಆಗುವಂತಹ ವಾರ್ಡ್‌ಗಳು ಅಥವಾ ಗ್ರಾಮಗಳ ಪಟ್ಟಿ ಸೂಕ್ಷ್ಮ ಯೋಜನೆಯನ್ನು ಸಿದ್ಧಪಡಿಸಿಕೊಂಡು ತುರ್ತು ಪರಿಸ್ಥಿತಿಗೆ ಶೀಘ್ರವಾಗಿಯೇ ಸ್ಪಂದಿಸುವುದು.

*ವೈದ್ಯಾಧಿಕಾರಿಗಳು , ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಇವರು ಮುನ್ನೆಚ್ಚರಿಕೆ ಕ್ರಮವಾಗಿ ರೋಗ ನಿರ್ಧಿಷ್ಠ ಸರ್ವೇಕ್ಷಣೆಯನ್ನು ಹೆಚ್ಚಿಸುವುದು. ತಾಲ್ಲೂಕು ವೈದ್ಯಾಧಿಕಾರಿಗಳು, ಅಗತ್ಯ ದತ್ತಾಂಶವನ್ನು ವಿಶ್ಲೇಷಿಸಿ, ರೋಗ ಪ್ರಸರಣವನ್ನು ಪತ್ತೆ ಹಚ್ಚಿ ತುರ್ತು ನಿಯಂತ್ರಣ ಕ್ರಮವನ್ನು ಪತ್ತೆ ಹಚ್ಚಿ ತುರ್ತು ನಿಯಂತ್ರಣ ಕ್ರಮವನ್ನು ಅನುಷ್ಠಾನಗೊಳಿಸುವಂತೆ ಕ್ರಮವನ್ನು ಕೈಗೊಳ್ಳವುದು.
* ಕೀಟ ಶಾಸ್ತ್ರೀಯ ಸೂಚ್ಯಂಕವನ್ನು ಮುಂಚಿತವಾಗಿಯೇ ವಿಶ್ಲೇಷಿಸಿ ಉಲ್ಬಣಿಸಬಹುದಾದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು.
* ಮುಖ್ಯ ಆರೋಗ್ಯಾಧಿಕಾರಿಗಳು ಬಿಬಿಎಂಪಿ /ಜಿಲ್ಲಾ ಅಧಿಕಾರಿಗಳು ಕ್ರಮವಾಗಿ ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿಗಳಿಂದ ಅಗತ್ಯ ಸಹಕಾರವನ್ನು ಪಡೆಯುವುದು. ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸರ್ವೇಕ್ಷಣ ಚಟುವಟಿಕೆಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪರಿಸ್ಥಿತಿ ಕುರಿತು ಆಯುಕ್ತಾಲಯಕ್ಕೆ ನಿಗದಿತವಾಗಿ ಮಾಹಿತಿಯನ್ನು ನೀಡುವುದು.

*ಪ್ರವಾಹದ ಸಮಯ ಸಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯವನ್ನು ಮನದಟ್ಟು ಮಾಡಿಕೊಳ್ಳವು ನಿಟ್ಟಿನಲ್ಲಿ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯನ್ನು ನಡೆಸಿ ಅಗತ್ಯ ಸಹಕಾರವನ್ನು ಪಡೆಯುವುದು.
*ಈ ಮೇಲಿನ ಎಲ್ಲಾ ಅಂಶಗಳ ಅನುಷ್ಠಾನದ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗಾಗಿ ಮತ್ತು ಸಮನ್ವಯವನ್ನು ಸಾಧಿಸಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸುವುದು.
ಪ್ರವಾಹವು ಕಡಿಮೆಯಾಗುವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣವಾಗುವ ಸಾಧ್ಯತೆ ಇರುವುದರಿಂದ , ಪರಿಸ್ಥಿತಿಯು ಸಾಮಾನ್ಯವಾಗುವವರೆಗೂ ಸರ್ವೇಕ್ಷಣ ಮತ್ತು ನಿಯಂತ್ರಣ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಗತ್ಯವಾಗಿದೆ. ಒಟ್ಟಾರೆಯಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಅಗತ್ಯ ಪ್ರಯತ್ನಗಳನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಳ್ಳಲು ಸೂಚಿಸಿದೆ.












Click it and Unblock the Notifications