Karnataka Rains: ರಾಜ್ಯದಲ್ಲಿ ನಿಲ್ಲುತ್ತಿಲ್ಲ ವರುಣನ ಆರ್ಭಟ; ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು, ಅಕ್ಟೋಬರ್‌ 25: ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಡಾನಾ ಚಂಡಮಾರುತದ ಆರ್ಭಟದಿಂದಾಗಿ ಮಳೆ ಅಬ್ಬರ ದೇಶಾದ್ಯಂತ ಜೋರಾಗಿದೆ. ಕೆಲ ರಾಜ್ಯಗಳು ಸೇರಿದಂತೆ ಕರ್ನಾಟಕ ವಿವಿಧ ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಮೋಡ ಮುಸುಕಿದ ವಾತಾವರಣ ಇದ್ದು, ಮಂಜು ಕವಿದಂತೆ ಕಾಣುತ್ತಿದೆ. ಅಲ್ಲದೇ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಸಕಲೇಶಪುರ, ಮೈಸೂರು, ಬೀದರ್ ಭಾಗದಲ್ಲಿ ಸಾಧಾರಣ ಮಳೆಯಾಗಲಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain expected in Bengaluru and coastal districts today

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಸಾಧ್ಯತೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತ ಹಾಗೂ ಚಂಡ ಮಾರುದಿಂದಾಗಿ ವಾರಗಳ ಕಾಲ ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಮಳೆಯಾಗಿದ್ದು, ರಾಜ್ಯದ ಜನತೆ ರೋಸಿ ಹೋಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಶೇಕಡ 50 ಪ್ರದೇಶಗಳಲ್ಲಿ ಮಳೆಯಾಗಲಿದೆ.

ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೇ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.

ರಕ್ಕಸ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದ್ದು, ಸಿಲಿಕಾನ್‌ ಸಿಟಿಯಲ್ಲಿ ದಾಖಲೆ ಮಳೆಗೆ ಜನರು ಕಂಗಾಲಾಗಿದ್ದಾರೆ. ಬೆಂಗಳೂರಿನಲ್ಲಿ ಅಕ್ಟೋಬರ್‌ 1ರಿಂದ ಅಕ್ಟೋಬರ್‌ 22ರವರೆಗೆ 118 ಮಿ.ಮೀ. ಮಳೆಯಾಗಿದೆ. 124 ವರ್ಷಗಳಲ್ಲಿಯೇ ನಾಲ್ಕನೇ ಅತ್ಯಧಿಕ ಮಳೆ ಸಿಲಿಕಾನ್‌ ಸಿಟಿಯಲ್ಲಿ ದಾಖಲಾಗಿದೆ.

ಇನ್ನೂ ಅಬ್ಬರದ ಮಳೆಗೆ ಬಿಟಿಎಂ ಲೇಔಟ್‌, ಸಿಲ್ಕ್‌ ಬೋರ್ಡ್‌, ಎಚ್‌ಎಸ್‌ಆರ್‌ ಲೇಔಟ್‌ ಸಂಪೂರ್ಣ ಮುಳುಗಿಹೋಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು ಜನರು ಎಚ್ಚರಿಕೆಯಿಂದರಲು ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಗಳಲ್ಲಿ ಮಳೆ ಆಗುತ್ತಿದೆ. ಇಂದು ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+