ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದೆಡೆ ಒಣಹವೆ

ಬೆಂಗಳೂರು, ಅಕ್ಟೋಬರ್ 31: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಪಣಂಬೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 33.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ಶನಿವಾರ ಹಳೇ ಮೈಸೂರು ಭಾಗದಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ 14 ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಉತ್ತ ಒಳನಾಡಿನಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

ಅಕ್ಟೋಬರ್ 31ರಿಂದ ನವೆಂಬರ್ 4ರವರೆಗೂ ದಕ್ಷಿಣ ಒಳನಾಡಿನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಕೊಡಗು,ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಮಳೆಯಾಗಲಿರುವ ಪ್ರದೇಶಗಳು

ಉತ್ತರ ಒಳನಾಡಿನಲ್ಲಿ ಮಳೆಯಾಗಲಿರುವ ಪ್ರದೇಶಗಳು

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ,ಹಾವೇರಿಯಲ್ಲಿ ನವೆಂಬರ್ 2 ರಿಂದ 4ರವರೆಗೆ ಮಳೆಯಾಗಲಿದೆ.

ಚಂಡಮಾರುತದ ಪರಿಣಾಮ

ಚಂಡಮಾರುತದ ಪರಿಣಾಮ

ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ತಮಿಳುನಾಡಿನ ಹಲವೆಡೆ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿಯೂ ಕೂಡ ಮಳೆ ಬೀಳಲಿದೆ.

Recommended Video

    ಕರ್ನಾಟಕ: ಕನ್ನಡ ರಾಜ್ಯೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ
    ಬೇರೆ ಬೇರೆ ರಾಜ್ಯಗಳಲ್ಲೂ ಮಳೆ

    ಬೇರೆ ಬೇರೆ ರಾಜ್ಯಗಳಲ್ಲೂ ಮಳೆ

    ವಾಯುಭಾರ ಕುಸಿತವು ಉತ್ತರ ತಮಿಳು ನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆ ಮಳೆಗೆ ಕಾರಣವಾಗಿದೆ. ಇದರಿಂದಾಗಿ ರಾಜ್ಯದ ಬೆಳಗಾವಿ, ಗದಗ, ಹಾವೇರಿ, ಧಾರವಾಡ, ದಕ್ಷಿಣ ಒಳನಾಡಿನಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ .ನ.2ರಂದು ಕೆಲ ಜಿಲ್ಲೆಗಳ ಸೀಮಿತ ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆ ನಿರೀಕ್ಷಿಸಬಹುದು. ಕಳೆದ ತಿಂಗಳು ಬಂದಷ್ಟು ಬಿರುಸು ಮಳೆ ಈ ಬಾರಿ ಕಾಣದು. ಹಿಂಗಾರು ಹಂಗಾಮಿನಲ್ಲೂ ರಾಜ್ಯಕ್ಕೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+