ಶ್ರೀಲಂಕಾದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮಳೆ ಸಾಧ್ಯತೆ

Posted By: Nayana
Subscribe to Oneindia Kannada

ಬೆಂಗಳೂರು, ಮಾರ್ಚ್ 13: ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಬಿಸಿಲ ಝಳ ತೀವ್ರವಾಗಿದೆ. ಇದರ ಬೆನ್ನಲ್ಲೇ ಮಾ.14ರಿಂದ ರಾಜ್ಯದಲ್ಲಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಶ್ರೀಲಂಕಾದ ದಕ್ಷಿಣ ಕರಾವಳಿ ಮತ್ತು ಮಾಲ್ಡೀವ್ಸ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗುವ ವಾತಾವರಣ ನಿರ್ಮಾಣವಾಗಿದ್ದು, ಚಂಡಮಾರುತ ಲಗ್ಗೆ ಇಡುವ ಸಾಧ್ಯತೆ ಇದೆ. ಶ್ರೀಲಂಕಾ, ತಮಿಳುನಾಡು, ಕೇರಳ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಬಿಸಿಲೇರುತ್ತಿದೆ, ಮಳೆ ಸಾಧ್ಯತೆಯೂ ಇದೆ!

ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಚಂಡಮಾರುತ ನಿರ್ಮಾಣವಾದರೆ ಅದು ಅರಬ್ಬಿ ಸಮುದ್ರದಲ್ಲಿ ವಾಯುವ್ಯ ದಿಕ್ಕಿನತ್ತ ಸಂಚರಿಸಲಿದ್ದು, ಕರಾವಳಿ ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಕೆಲ ಪ್ರದೇಶದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

Rain expected in Karnataka from tomorrow

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಮಂಗಳವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ನಗರದಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ 19.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ ನಲ್ಲಿ 35.5ಗರಿಷ್ಟ ಉಷ್ಣಾಂಶ ಹಾಗೂ 17ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಇನ್ನು ಎಚ್ ಎಎಲ್ ನಲ್ಲಿ 32.6ಗರಿಷ್ಠ ಉಷ್ಣಾಂಶ ಹಾಗೂ 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Indian meteorological department has forecasted that rain fall in Southern part of karnataka, Kerala and Tamil Nadu due to depression in Srilanka.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ