ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರಿ ಮಳೆ ಮುನ್ಸೂಚನೆ: ಕರ್ನಾಟಕದ 23 ಜಿಲ್ಲೆಗಳಿಗೆ ಅಲರ್ಟ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 8: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಒಂದೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದೆ, ವಿಜಯದಶಮಿಯಂದು ಸಾಮಾನ್ಯವಾಗಿ ಮಳೆಯಾಗುತ್ತದೆ. ಈ ಬಾರಿಯೂ ಕೂಡ ಮೋಡದ ವಾತಾವರಣೆ ನಿರ್ಮಾಣವಾಗಿದೆ.

5 ದಿನ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಭಾರಿ ಮಳೆ5 ದಿನ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಭಾರಿ ಮಳೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಸ್ವಲ್ಪ ನಿಂತಿದ್ದು, ಇದೀಗ ಉತ್ತರ ಕರ್ನಾಟಕ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಒಟ್ಟು 23 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Rain Fall Yellow Alert In 23 Districts Of Karnataka

ಸುಮಾರು 7 ರಿಂದ 11 ಸೆಂ.ಮೀ. ಮಳೆಯಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆಯಿಂದ ರಾತ್ರಿವರೆಗೂ ವ್ಯಾಪಕ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ತೆಲಂಗಾಣದಲ್ಲಿ ಸೈಕ್ಲೋನ್ ಸಕ್ರ್ಯೂಲೇಷನ್ ಇರುವುದರಿಂದ ಹಾಗೂ ಕೇರಳದ ಕಡಿಮೆ ಒತ್ತಡ ರೇಖೆ ತನ್ನ ದಿಕ್ಕು ಬದಲಿಸುತ್ತಿರುವುದರಿಂದ ಮಳೆ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.

ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ 7 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ 23 ಜಿಲ್ಲೆಗಳಿಗೆ ಹವಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಬೆಂಗಳೂರಿಗೂ ಸಹ ಹಳದಿ ಅಲರ್ಟ್ ಘೋಷಿಸಿದ್ದು, ಸಂಜೆಯಿಂದ ರಾತ್ರಿಯವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರವೂ ಕೂಡ ಹವಾಮಾನ ಇಲಾಖೆ ರಾಜ್ಯದ 26 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿತ್ತು.

English summary
Heavy rainfall is expected in the 23 districts of Karnataka over the next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X