ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ

Recommended Video

      ಕರ್ನಾಟಕದ ಹಲವು ಭಾಗಗಳಲ್ಲಿ 3 ದಿನಗಳು ಮಳೆ ಸಾಧ್ಯತೆ | Oneindia Kannada

      ಬೆಂಗಳೂರು, ನವೆಂಬರ್ 22: ಈಗಾಗಲೇ ಗಜ ಚಂಡ ಮಾರುತ ತಮಿಳುನಾಡು, ಆಂಧ್ರ ಪ್ರದೇಶದಕ್ಕೆ ಲಗ್ಗೆ ಇಟ್ಟು ಸಾಕಷ್ಟು ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡಿದ್ದಲ್ಲದೆ 46 ಮಂದಿ ಮೃತಪಟ್ಟಿದ್ದರು.

      ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಕರ್ನಾಟಕದಲ್ಲಿ ಎರಡು ದಿನ ಮಳೆಯಾಗುವ ನಿರೀಕ್ಷೆ ಇದೆ.

      ಈಗಾಗಲೇ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ರಾಜ್ಯದಲ್ಲಿಯೂ ನವೆಂಬರ್ 24ರವರೆಗೆ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಮತ್ತು ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

      Rain forecast in south interior Karnataka for two more days

      ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

      ಬೆಂಗಳೂರು ನಗರದಲ್ಲಿ ಗರಿಷ್ಠ 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 25.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.8 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ 19.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬುಧವಾರದಿಂದಲೇ ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ತುಂತುರು ಮಳೆಯಾಗುತ್ತಿದೆ.

      ಕಳೆದ ವಾರ ಗಜ ಚಂಡಮಾರುತ ಆರ್ಭಟ ಜೋರಾಗಿತ್ತು. ನವೆಂಬರ್ 19 ರಿಂದ 21 ರವರಗೂ ಚಂಡಮಾರುತದ ಎಫೆಕ್ಟ್ ಜೋರಾಗಿರಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿತ್ತು. ಗಜ ಚಂಡಮಾರುತದ ಭೀಕರತೆಗೆ ತಮಿಳುನಾಡಿನಲ್ಲಿ ಇದುವರೆಗೂ 45 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದರು.

      ವಾಯುಭಾರ ಕುಸಿತ ವೇಗದ ಜೊತೆಗೆ ಚಳಿ ಗಾಳಿಯೂ 30 ಕಿ.ಮೀ ವೇಗದಲ್ಲಿ ಬೀದುತ್ತಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಚಳಿಗಾಳಿ ಬೀಸಲಿದೆ ಎಂದು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+