ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ ಮನ್ಸೂಚನೆ: ಎಲ್ಲೆಲ್ಲಿ ತಿಳಿಯಿರಿ

|
Google Oneindia Kannada News

ಕಳೆದ ಹಲವು ದಿನಗಳಿಂದ ರಾಜ್ಯದ ಕೆಲವೆಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಕೆರೆ ಕಟ್ಟೆಗಳು ಒಡೆದು ಹೋಗಿವೆ, ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು ರಸ್ತೆಗಳು ಜಲಾವೃತಗೊಂಡಿವೆ. ಈ ನಡುವೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಸಾಧ್ಯತೆಯಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಗುಡುಗು ಮತ್ತು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Rain forecast in the state over the next 24 hours: Know where

ಹೀಗಾಗಿ ಕರ್ನಾಟಕದ ದಕ್ಕಿಣ ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ವರಗೆಗೂ ಇರುವ ಸಾಧ್ಯತೆಯಿದ್ದು ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಇಂದು ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಇದರೊಂದಿಗೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಕೂಡ ಇದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ತಾಪಮಾನ ಇಳಿಕೆಯಾಗಿದೆ. ಜೊತೆಗೆ ಇದು ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.

Rain forecast in the state over the next 24 hours: Know where

English summary
karnataka Rain: weather department has predicted more showers and thunderstorms in most parts of the coast and inland over the next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X