ಮಳೆ ಹಾನಿ : ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ದೇಶಪಾಂಡೆ ಪ್ರವಾಸ
ಜೂನ್ 26, ಬೆಂಗಳೂರು : ಮಳೆ-ಬೆಳೆ ಪರಿಸ್ಥಿತಿ, ಮಳೆಯಿಂದ ಆಗಿರುವ ಹಾನಿ ಮತ್ತು ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲಿಸಲು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್ ವಿ ದೇಶಪಾಂಡೆ ಜೂನ್ 27ರ ಬುಧವಾರದಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲಿರುವ ಸಚಿವರು, ನಂತರ 11 ಗಂಟೆಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಶಿವಮೊಗ್ಗ ತಲುಪಲಿರುವ ದೇಶಪಾಂಡೆಯವರು, ಮೊದಲಿಗೆ ಅಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ, ಅಹವಾಲುಗಳನ್ನು ಆಲಿಸಲಿದ್ದಾರೆ. ಬಳಿಕ 4.30ಕ್ಕೆ ಜಿಲ್ಲೆಯ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ.












Click it and Unblock the Notifications