Bengaluru Rain: ಬೆಂಗಳೂರು ನಗರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ವರುಣನ ಸಿಂಚನ; ಯಾವ ಪ್ರದೇಶದಲ್ಲಿ ಮಳೆ?
ಬೆಂಗಳೂರು, ಜೂನ್ 27: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದೆ. ಗುರುವಾರ ಬೆಳಗ್ಗಿನ ಜಾವ 5 ಗಂಟೆ ಬಳಿಕ ಮೆಜೆಸ್ಟಿಕ್, ಮಲ್ಲೇಶ್ವರ, ಶೇಷಾದ್ರಿಪುರ, ರಾಜಾಜಿನಗರ, ಶಾಂತಿನಗರ, ಎಂಜಿ ರಸ್ತೆ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಇದರಿಂದಾಗಿ ಬೆಳಗ್ಗಿನ ಹೊತ್ತಿನಲ್ಲಿ ರಸ್ತೆಗಳಿಗಿಳಿದವರಿಗೆ ಟ್ರಾಪಿಕ್ ಜಾಮ್ ನ ಬಿಸಿ ತಟ್ಟಿದೆ.
ಹೌದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂಗಾರು ಮಳೆಗೂ ಮುನ್ನವೇ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂಗಾರು ಮಳೆ ರಾಜ್ಯದ ಅನೇಕ ಭಾಗಗಳಲ್ಲಿ ಚುರುಕು ಪಡೆದಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಸುವ ಲಕ್ಷಣಗಳು ಕಂಡು ಬಂದಿವೆ.

ಜುಲೈ 01 ರವರೆಗೆ ಬೆಂಗಳೂರಿನಲ್ಲಿ ಹವಾಮಾನದಲ್ಲಿ ಹಲವು ಬದಲಾವಣೆಗಳು ಆಗಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ತುಂತುರು ಮಳೆಯಾಗಿರುವುದರಿಂದ ಕನಿಷ್ಠ ತಾಪಮಾನದಲ್ಲಿ ತುಸು ಬದಲಾವಣೆ ಆಗಿದ್ದರಿಂದ ಬೆಳಗ್ಗೆ ಚಳಿಯ ವಾತಾವರಣ ಆಗುತ್ತಿದೆ.
ಇನ್ನೂ ಮಂಗಳವಾರ ರಾತ್ರಿ ಬಸವನಗುಡಿ, ಜಯನಗರ, ಜಯನಗರ, ರಾಜಮಹಲ್ ಗುಟ್ಟಹಳ್ಳಿ ಸೇರಿದಂತೆ ಒಂದಷ್ಟು ಬಡಾವಣೆಗಳಲ್ಲಿ ಆಗಾಗ ತುಂತುರು ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.












Click it and Unblock the Notifications