ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 26ರಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಮೇ 24; ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ತೌಕ್ತೆ ಚಂಡಮಾರುತದ ಅಬ್ಬರದಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಮಳೆ ಸುರಿದಿತ್ತು. ಮೇ 26ರಿಂದ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ: ಎಚ್.ಡಿ.ಪುರದಲ್ಲಿ ಅತ್ಯಧಿಕ ಮಳೆ ಚಿತ್ರದುರ್ಗ ಜಿಲ್ಲೆಯ ಮಳೆ ವರದಿ: ಎಚ್.ಡಿ.ಪುರದಲ್ಲಿ ಅತ್ಯಧಿಕ ಮಳೆ

ಉಳಿದ ಜಿಲ್ಲೆಗಳಲ್ಲಿ ಮೇ 25ರ ಬಳಿಕ ಮಳೆ ತಗ್ಗಲಿದೆ. ಆದರೆ ಆಗಾಗ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮೇ 26ರ ಬಳಿಕ ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಯಾಸ್ ಚಂಡಮಾರುತ: ಒಡಿಶಾದ 3 ಜಿಲ್ಲೆಗೆ ಹೆಚ್ಚು ಅಪಾಯ ಎಂದ ಹವಾಮಾನ ಇಲಾಖೆಯಾಸ್ ಚಂಡಮಾರುತ: ಒಡಿಶಾದ 3 ಜಿಲ್ಲೆಗೆ ಹೆಚ್ಚು ಅಪಾಯ ಎಂದ ಹವಾಮಾನ ಇಲಾಖೆ

Rain In Karavali Interior Karnataka From May 26

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ತೌಕ್ತೆ ಚಂಡಮಾರುತ: ಗುಜರಾತ್‌ಗೆ 1000 ಕೋಟಿ ರೂ, ನೆರವು ಘೋಷಿಸಿದ ಪ್ರಧಾನಿ ಮೋದಿತೌಕ್ತೆ ಚಂಡಮಾರುತ: ಗುಜರಾತ್‌ಗೆ 1000 ಕೋಟಿ ರೂ, ನೆರವು ಘೋಷಿಸಿದ ಪ್ರಧಾನಿ ಮೋದಿ

ಮುಂಗಾರು ಆಗಮನ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಇದೆ. ಅದಕ್ಕೂ ಮೊದಲು ಮೇ ತಿಂಗಳ ಕೊನೆ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನೈಋತ್ಯ ಮುಂಗಾರು ಜೂನ್ 1ರಂದು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ 5ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಮಳೆ ನಿರೀಕ್ಷಿಸಬಹುದು.

14 ರೈಲುಗಳ ಸಂಚಾರ ರದ್ದು; 'ಯಾಸ್' ಚಂಡಮಾರುತದ ಪ್ರಭಾವದ ಕಾರಣ ಬೆಂಗಳೂರಿನಿಂದ ಹೊರ ರಾಜ್ಯಗಳಿಗೆ ಸಂಚಾರ ನಡೆಸಬೇಕಿದ್ದ 14 ರೈಲುಗಳ ಸಂಚಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

Recommended Video

England ಪ್ರವಾಸ ಕೈಗೊಂಡ ಕನ್ನಡದ ಬೌಲರ್ | Oneindia Kannada

ಗೌಹಾತಿ, ಮುಜಾಫರ್‌ಪುರ, ಬಾಗಲ್‌ಪುರ, ಕಾಮಾಕ್ಯ, ಹೌರಾ, ವಾಸ್ಕೋಡಾಗಾಮ, ಅಗರ್ತಲಾಗಳಿಗೆ ಸಂಚಾರ ನಡೆಸುವ ರೈಲುಗಳನ್ನು ಮೇ 29ರ ತನಕ ರದ್ದುಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

English summary
Indian meteorological department predicted rain in Karavali and interior Karnataka from May 26. Yellow alert issued in various districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X