Karnataka Rains: ರಾಜ್ಯದಲ್ಲಿ ನವೆಂಬರ್ 29ರ ವರೆಗೆ ವರುಣಾರ್ಭಟ, ಎಲ್ಲೆಲ್ಲಿ ಮಳೆ!
Rain in Karnataka:ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಇದರಿಂದ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಇದರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ನವೆಂಬರ್ 29ರ ವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ ತುಸು ಬಿಡುವು ಕೊಟ್ಟಿತ್ತು. ಇದೀಗ ಮತ್ತೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ. ಕರ್ನಾಟಕದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕರ್ನಾಟಕದಲ್ಲಿ ನವೆಂಬರ್ 24 ಮತ್ತು 25ರಂದು ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮಳೆಯಾಗಲಿದ್ದು, ಬಹುತೇಕ ಒಣಹವೆ ಮುಂದುವರಿಯಲಿದೆ. ಆದರೆ, ನವೆಂಬರ್ 26ರಿಂದ ನವೆಂಬರ್ 29ರ ವರೆಗೆ ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇಂದು (ನವೆಂಬರ್ 24) ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ಧಾರವಾಡ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 13 ರಿಂದ 15 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಚಳಿಯ ವಾತಾವರಣ ಇರಲಿದೆ. ಇನ್ನು ನವೆಂಬರ್ 25ಕ್ಕೆ ರಾಜ್ಯದಲ್ಲಿ ಬಹುತೇಕ ಒಣಹವೆ ಇರಲಿದ್ದು, ಒಂದೆರಡು ಕಡೆ ಮಂಜು ಮುಸುಕಿದ ವಾತಾವರಣ ಇರಲಿದೆ.
ನವೆಂಬರ್ 26 ಹಾಗೂ ನವೆಂಬರ್ 27ಕ್ಕೆ: ಮುಂದಿನ ಮಂಗಳವಾರ (ನ.26ಕ್ಕೆ) ಹಾಗೂ ಬುಧವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜ ನಗರ ಹಾಗೂ ರಾಮನಗರದಲ್ಲಿ ಭರ್ಜರಿ ಮಳೆಯಾಗಲಿದೆ. ಉಳಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 28ಕ್ಕೆ: ಕರ್ನಾಟಕದ ವಿವಿಧ ಭಾಗದಲ್ಲಿ ವರುಣಾರ್ಭಟ ಇದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಇನ್ನು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ನವೆಂಬರ್ 29: ಈ ದಿನ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ ಹಾಗೂ ರಾಮನಗರ ಜಿಲ್ಲೆಯ ವಿವಿಧ ಭಾಗದಲ್ಲಿ ಮಳೆಯಾಗಲಿದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಗರಿಷ್ಠ ಉಷ್ಣಾಂಶವು 35.3 ಡಿಗ್ರಿ ಸೆಲ್ಸಿಯಸ್ ಹೊನ್ನಾವರದಲ್ಲಿ ದಾಖಲಾಗಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶವು 12 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ. ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ಸಹ ಈ ಸಂದರ್ಭದಲ್ಲಿ ಕೊಟ್ಟಿಲ್ಲ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ಅಲ್ಲದೇ ರಾಜ್ಯದಾದ್ಯಂತ ಒಣಹವೆ ಮುಂದುವರಿದಿತ್ತು.












Click it and Unblock the Notifications