ಕರ್ನಾಟಕ; ಸತತ ಮಳೆ, ತರಕಾರಿ ಬೆಲೆಗಳಲ್ಲಿ ಏರಿಕೆ

ಬೆಂಗಳೂರು, ಅಕ್ಟೋಬರ್ 12; ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಜನರಿಗೆ ಸಂಕಷ್ಟ ತಂದಿದೆ. ಮಳೆ ಹಾನಿ ಒಂದು ಕಡೆ ಮತ್ತೊಂದು ಕಡೆ ತರಕಾರಿಗಳ ಬೆಲೆಗಳು ಏರಿಕೆಯಾಗಿವೆ.

ಸೆಪ್ಟೆಂಬರ್‌ನಲ್ಲಿಯೇ ನೈಋತ್ಯ ಮುಂಗಾರು ಅಂತ್ಯಗೊಂಡಿದೆ. ಆದರೆ ಚಂಡಮಾರುತದ ಪ್ರಭಾವದಿಂದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 16ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.

ಕಲಬುರಗಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಳೆಯಿಂದಾಗಿ ತರಕಾರಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಆದ್ದರಿಂದ ಬೆಲೆ ಏರಿಕೆಯಾಗಿದೆ.

Rain In Karnataka Vegetable Prices Surged

ಭಾನುವಾರವೇ ಬೆಂಗಳೂರು ನಗರದಲ್ಲಿ ಟೊಮೆಟೋ ಬೆಲೆ 60ರ ಗಡಿ ದಾಟಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗ ರೈತರಿಗೂ ನಷ್ಟವಾಗುತ್ತಿದೆ. ಮಳೆ ನೀರು ಹೊಲಗಳಿಗೆ ನುಗ್ಗಿ ವಿವಿಧ ಬೆಳೆಗಳು ಜಲಾವೃತಗೊಂಡು ನಷ್ಟ ಉಂಟಾಗಿದೆ.

ಕಲಬುರಗಿಯ ತರಕಾರಿ ವ್ಯಾಪಾರಿ ಸಲಾವುದ್ದೀನ್ ಈ ಕುರಿತು ಮಾತನಾಡಿದ್ದಾರೆ, "ಭಾರೀ ಮಳೆಯ ಕಾರಣ ನಮಗೆ ತರಕಾರಿ ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಬೆಲೆಗಳು ಏರಿಕೆಯಾಗಿವೆ. ರೈತರು ಸಹ ಇಂತಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ" ಎಂದು ಹೇಳಿದ್ದಾರೆ.

ತರಕಾರಿ ಕೊಳ್ಳಲು ಕಲಬುರಿಗೆ ಆಗಮಿಸಿದ್ದ ಚಂದ್ರ ಪಾಟೀಲ್ ಮಾತನಾಡಿ, "ಟೊಮೆಟೋ 60 ರೂ. ಕೆಜಿಯಾಗಿದೆ. ಈರುಳ್ಳಿ ಬೆಲೆ 50 ರೂ. ಆಗಿದೆ. ನಾವು 10 ತರಕಾರಿ ತೆಗೆದುಕೊಳ್ಳುವವರು ಈಗ 2.5 ಕೆಜಿ ಖರೀದಿ ಮಾಡುತ್ತಿದ್ದೇವೆ" ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸಹ ತರಕಾರಿಗಳ ಬೆಲೆಗಳು ಹೆಚ್ಚಾಗಿವೆ. ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈರುಳ್ಳಿ ಬೆಲೆ 40 ರಿಂದ 50 ರೂ.ಗೆ ಏರಿಕೆಯಾಗಿದೆ. ಆಲೂಗೆಡ್ಡೆ ಬೆಲೆ 25 ರಿಂದ 30 ರೂ.ಗೆ ಏರಿಕೆಯಾಗಿದೆ ಎಂದು ಗಾಂಧಿ ಬಜಾರ್‌ನ ವ್ಯಾಪಾರಿಗಳು ಹೇಳಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯ ಕಾರಣ ನವದೆಹಲಿಯಲ್ಲಿ ತರಕಾರಿ ದರ ಏರಿಕೆಯಾಗಿದೆ. ಓಕ್ಲಾ ಮಾರುಕಟ್ಟೆಯಲ್ಲಿ ಟೊಮೆಟೋ ದರ 10 ರಿಂದ 20 ಇದ್ದದ್ದು ಈಗ 30 ರಿಂದ 40 ರೂ.ಗೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿಯೂ ಬೆಳೆಗಳಿಗೆ ಹಾನಿಯಾಗಿದೆ.

ದಸರಾ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಹೆಚ್ಚು ದರ ನೀಡಿ ಖರೀದಿ ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ಜನರಿಗೆ ತರಕಾರಿ ಬೆಲೆ ಏರಿಕೆ ಹೊಸ ಸಂಕಷ್ಟ ತಂದಿದೆ.

ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಮತ್ತು ಉತ್ತರ ಅಂಡಮಾನ್ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಅಕ್ಟೋಬರ್ 12 ಮತ್ತು 13ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 16ರ ತನಕ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ. ಸೋಮವಾರ ರಾತ್ರಿ ಮತ್ತು ಮಂಗಳವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದೆ.

ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 14.66 ಮಿ. ಮೀ. ಮಳೆಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ 25.78 ಮಿ. ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 11.18 ಮಿ. ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ 7.03 ಮಿ. ಮೀ ಮಳೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.7 ಅಡಿಗಳು. ಒಳಹರಿವು 1478 ಕ್ಯುಸೆಕ್ ಆಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+