ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯಾದ್ಯಂತ ಎರಡು ದಿನ ಮಳೆ

ಬೆಂಗಳೂರು, ನವೆಂಬರ್ 19: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯಾದ್ಯಂತ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಕಾರಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯ ಹಲವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಕೆಲವು ಕಡೆ ಸುರಿಯುತ್ತಿರುವ ಮಳೆ 2 ದಿನ ಮುಂದುವರಿಯಯುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಮುಂದಿನ ಎರಡು ದಿನ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

 Rain In Many Areas Of Karnataka, More Likely In Next 2 Days

ಶೃಂಗೇರಿ, ತರಿಕೆರೆಯಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದದಲ್ಲಿ ಮಳೆಯಾಗಲಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Recommended Video

      Chinaಗೆ ತಕ್ಕ ಪಾಠ ಕಲಿಸಲು ಮುಂದಾದ Ratan Tata | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+