Karnataka Rains: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ
ಬೆಂಗಳೂರು, ಅಕ್ಟೋಬರ್ 10: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 10 ಮತ್ತು 13ರವೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 13 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 12 ರವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಒಂದು ವಾರಗಳವರೆಗೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ದಾವಣಗೆರೆ, ವಿಜಯನಗರ, ಮಂಡ್ಯ, ಮೈಸೂರು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಕಿರವತ್ತಿ, ಕೊಲ್ಲೂರು, ಹುಂಚದಕಟ್ಟೆ, ಮುಂಡಗೋಡು, ಕದ್ರಾ, ಸಿದ್ದಾಪುರ, ತ್ಯಾಗರ್ತಿ, ಜಯಪುರ, ಎನ್ಆರ್ಪುರ, ಬನವಾಸಿ, ಕಾರವಾರ, ಲೋಂಡಾ, ಆಗುಂಬೆ, ಹಿರೇಕೆರೂರು, ಕೊಟ್ಟಿಗೆಹಾರ, ಹಳಿಯಾಳ, ಯಲ್ಲಾಪುರ, ಕುಂದಗೋಳ, ಹಾವೇರಿ, ಶೃಂಗೇರಿ, ಕೊಪ್ಪ, ಮೂಡಿಗೆರೆಯಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳವರೆಗೆ ಬಹುತೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇನ್ನೂ ಗೋಕರ್ಣ, ಗೇರುಸೊಪ್ಪ, ಧಾರವಾಡ, ಲಕ್ಷ್ಮೇಶ್ವರ, ಧಾರವಾಡ, ನಾಯಕನಹಟ್ಟಿ, ಕಮ್ಮರಡಿ, ಕುಂದಾಪುರ, ಮಂಕಿ, ಹೊನ್ನಾವರ, ಧರ್ಮಸ್ಥಳ, ಕೋಟ, ಉಡುಪಿ, ಬೈಲಹೊಂಗಲ, ನಾಪೋಕ್ಲು, ಚನ್ನಗಿರಿ, ನರಗುಂದ, ದಾವಣಗೆರೆ, ಬೇಲೂರು, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.
ವರುಣನ ಅಬ್ಬರಕ್ಕೆ ವ್ಯಕ್ತಿ ನೀರು ಪಾಲು
ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರೀ ಶಿವಮೊಗ್ಗ ನಗರದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ಸಿಲುಕಿದ್ದ ಗೋಪಾಲ್ (35) ಎಂಬ ವ್ಯಕ್ತಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಗೋಪಾಲ್ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ. ಬೆಳಗ್ಗೆ ಎಚ್ಚರವಾದಾಗ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ದಡಕ್ಕೆ ಬರಲಾಗದೆ ಆತಂಕಕ್ಕೀಡಾಗಿದ್ದ. ಈ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೋಟ್ ಮೂಲಕ ಗೋಪಾಲ್ ಅವರನ್ನ ರಕ್ಷಿಸಿದ್ದಾರೆ. ಅಲ್ಲದೇ ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications