ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 5 ದಿನ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 07: ಬುರೆವಿ ಚಂಡಮಾರುತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಡಿಸೆಂಬರ್ 7 ರಿಂದ 12ರವರೆಗೆ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಬೀದರ್‌ನಲ್ಲಿ ಅತಿ ಕನಿಷ್ಠ ಅಂದರೆ 8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡಕವಿದ ವಾತಾವರಣ ಮುಂದುವರೆಯಲಿದೆ, ಗರಿಷ್ಠ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಚಂಡಮಾರುತ ಪ್ರಭಾವ, ಬಿಬಿಎಂಪಿ ವ್ಯಾಪ್ತಿಯಲ್ಲಿ 2 ದಿನ ಮಳೆ ಚಂಡಮಾರುತ ಪ್ರಭಾವ, ಬಿಬಿಎಂಪಿ ವ್ಯಾಪ್ತಿಯಲ್ಲಿ 2 ದಿನ ಮಳೆ

ಬುರೆವಿ ಚಂಡಮಾರುತದ ಅಬ್ಬರ ಬಹುತೇಕ ಕ್ಷೀಣಿಸಿದ್ದರೂ ನಗರದಲ್ಲಿ ಚಳಿಯಾಗಿದ್ದು ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ.

ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಸಮಯದ ಕಾಲ ಬಿಸಿಲಿನ ದರ್ಶನವಾಗಿದ್ದು ಬಿಟ್ಟರೆ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಎಲ್ಲೆಡೆ ವಾತಾವರಣ ಚಳಿ ಹಾಗೂ ಮೋಡ ಕವಿದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಕರಾವಳಿಯಲ್ಲಿ ಮಳೆ

ಕರ್ನಾಟಕದ ಕರಾವಳಿಯಲ್ಲಿ ಮಳೆ

ಕರ್ನಾಟಕದ ಕರಾವಳಿ ಭಾಗಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ದಲ್ಲಿ ಡಿಸೆಂಬರ್ 7 ರಿಂದ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಆರು ದಿನ ಮಳೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಆರು ದಿನ ಮಳೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗಲಿದೆ.

ಉತ್ತರ ಒಳನಾಡಿನ ಪರಿಸ್ಥಿತಿ ಹೇಗಿದೆ?

ಉತ್ತರ ಒಳನಾಡಿನ ಪರಿಸ್ಥಿತಿ ಹೇಗಿದೆ?

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಡಿಸೆಂಬರ್ 10ರಂದು ಮಳೆಯಾಗಲಿದೆ, ಇನ್ನುಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Recommended Video

Rohit ಹಾಗು Bumrah ಇಲ್ಲದಿದ್ದರೂ Team India ಸರಿಣಿ ಗೆದ್ದಿದ್ದು ಹೇಗೆ | Oneindia Kannada
ತಮಿಳುನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ತಮಿಳುನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಮುಂದಿನ ಒಂದು ದಿನಗಳ ಕಾಲ ಬುರೆವಿ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

English summary
Metorological department predicted that Rain In Most Of the South Interion Districts Of Karnataka Fo The Next 5 Days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X