Karnataka Rain: ರಾಜ್ಯದ ಹಲವೆಡೆ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ.. ಎಲ್ಲೆಲ್ಲಿ ತಿಳಿಯಿರಿ..
ಬೆಂಗಳೂರು ಜನವರಿ 4: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇದರ ನಡುವೆ ಮೋಡ ಕವಿದ ವಾತಾವರಣ ಮಳೆಯ ಸೂಚನೆಯನ್ನು ನೀಡಿದೆ. ಈ ಬಾರಿ ನಿರೀಕ್ಷೆಯಂತೆ ರಾಜ್ಯದಲ್ಲಿ ಮಳೆಯಾಗಿಲ್ಲ. ಆದರೆ ಚಳಿಗಾಲದಲ್ಲೂ ಮಳೆ ಮುಂದುವರೆದಿದೆ.
ರಾಜ್ಯದ್ಯಾಂತ ಶೀತಗಾಳಿಯ ನಡುವೆ ಆಗಾಗ ಅಲ್ಲಲ್ಲಿ ವರುಣ ಧರೆಗೆ ಇಳಿಯುತ್ತಿದ್ದಾನೆ. ಇದರ ನಡುವೆ ಇಂದಿನಿಂದ ಆರು ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹಲಾಮಾನ ಇಲಾಖೆ ನೀಡಿದೆ. ಜನವರಿ 4ರಿಂದ 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜೆಲ್ಲೆಗಳಲ್ಲಿ ಮಳೆಯಾಗಿಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಮೋಡ ಮುಚ್ಚಿದೆ. ವಾತಾವರಣ ತಂಪಾಗಿದ್ದು ಸೂರ್ಯನ ಬಿಸಿ ಮೈಗೆ ತಾಗುತ್ತಿಲ್ಲ. ತಂಪಾದ ಗಾಳಿಯಿಂದಾಗಿ ಮನೆಯಿಂದ ಹೊರಬರುವುದು ಕಷ್ಟವಾಗಿದೆ. ಇದರ ನಡುವೆ ಮಳೆಯಾಗುವ ಸೂಚನೆ ನೀಡಲಾಗಿದ್ದು ಜನ ಛತ್ರಿ, ಸ್ವಟರ್, ರೇನ್ ಕೋರ್ಟ್ ಸಮೇತ ಮನೆಯಿಂದ ಹೊರ ನಡೆಯುತ್ತಿದ್ದಾರೆ.
ಧಾರವಾಡ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ರಾಯಚೂರು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್‌ನಲ್ಲಿ ಮಳೆಯಾಗಲಿದೆ. ಜೊತೆಗೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಿತ್ರದುರ್ಗ, ಹಾಸನ, ದಾವರಣಗೆರೆ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ರಾಮನಗರ, ವಿಜಯನಗರ ಹಾಗೂ ತುಮಕೂರಿನಲ್ಲೂ ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 120.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಅಲ್ಲದೆ ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮೈಸೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications