ವಾರಾಂತ್ಯದಲ್ಲಿ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ

Recommended Video

      ವಾರಾಂತ್ಯದಲ್ಲಿ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | Oneindia Kannada

      ಬೆಂಗಳೂರು, ನವೆಂಬರ್ 14: ಕರ್ನಾಟಕದಲ್ಲಿ ಮತ್ತೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಹಿಮಾಚಲ ಪ್ರದೇಶದಲ್ಲಿ ಹೆಚ್ಚು ಮಳೆಯಾಗಲಿರುವ ಕಾರಣ ಐದು ಜಿಲ್ಲೆಗಳಿಗೆ ಯೆಲ್ಲೋ ಅರ್ಟ್ ಘೋಷಿಸಲಾಗಿದೆ.

      ಕರ್ನಾಟಕ, ಒಡಿಶಾ, ಕೇರಳ, ತಮಿಳುನಾಡುಸೇರಿದಂತೆ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಚಂಬಾ, ಕಾಂಗ್ರಾ, ಮಂಡಿ, ಕುಲ್ಲು, ಶಿಮ್ಲಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಿಮಾಚಲ ಪ್ರದೇಶದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

      Rain Likely In Karnataka Over The Weekend

      ಹಿಮಾಚಲ ಪ್ರದೇಶದಲ್ಲಿ ಕನಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.ಕೀಲಾಂಗ್‌ನಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಕನಿಷ್ಠ 0.3 ಡಿಗ್ರಿ ಸೆಲ್ಸಿಯಸ್, ಗರಿಷ್ಠ 15.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      ಪ್ರೇಕ್ಷಣೀಯ ಸ್ಥಳ ಮನಾಲಿಯಲ್ಲಿ ಕನಿಷ್ಠ 4.2 ಡಿಗ್ರಿ ಸೆಲ್ಸಿಯಸ್, ಗರಿಷ್ಠ 17.6 ಡಿಗ್ರಿ ಸೆಲ್ಸಿಯಸ್, ಶಿಮ್ಲಾದಲ್ಲಿ ಕನಿಷ್ಠ 10.5 ಡಿಗ್ರಿ ಸೆಲ್ಸಿಯಸ್, ಗರಿಷ್ಠ 20.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      ಇನ್ನು ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ವಾರಾಂತ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಇನ್ನುಳಿದಂತೆ ಉತ್ತರ ಕರ್ನಾಟಕ ಇನ್ನಿತರೆ ಪ್ರದೇಶಗಳಲ್ಲಿ ಒಣಹವೆ ಮುಂದುವರೆದಿದೆ. ಬುಧವಾರದವರೆಗೂ ಬಿಸಲಿತ್ತು ಆದರೆ ಗುರುವಾರ ಬೆಳಗ್ಗೆ ಇಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+