Karnataka Alert Rain: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಏಪ್ರಿಲ್‌ 07: ರಾಜ್ಯದಲ್ಲಿ ಬೇಸಿಗೆಗೆ ಒಂದು ಕಡೆಯಾದ್ರೆ ಇತ್ತ ಕೆಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ರಾಜ್ಯಾದ್ಯಾಂತ ಮುಂದಿನ ಐದು ದಿನಗಳ ಕಾಲ ಗುಡುಗು ಮಿಂಚು ಸೇರಿದಂತೆ 30 -60 ಕಿಮಿ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಚಂಡಮಾರುತ ಪರಿಚಲನೆಯು ತಮಿಳುನಾಡು ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ತರಿಸಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

rain likely in more than 20 districts including coastal Karnataka on Till April 13

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮುಂಗಾರು ಆರಂಭಕ್ಕೂ ಮೊದಲೇ ಕೃಷ್ಣರಾಜಪೇಟೆ, ಆಗುಂಬೆ, ಪುತ್ತೂರು, ಬೆಳ್ತಂಗಡಿ, ಕಮ್ಮರಡಿ, ಕಳಸ, ನಾಪೋಕ್ಲು, ಕಾರ್ಕಳ, ಯಲ್ಲಾಪುರ, ಮಸ್ಕಿ, ಲಿಂಗಸುಗೂರು, ಕಕ್ಕೇರಿ, ಮುದ್ದೇಬಿಹಾಳ, ನಾಗಮಂಗಲ, ಅಜ್ಜಂಪುರ, ಹೊನ್ನಾಳಿ, ಸಿದ್ದಾಪುರ, ಬನವಾಸಿ, ಉಪ್ಪಿನಂಗಡಿ, ಬಬಲೇಶ್ವರ, ಕೂಡಲಸಂಗಮ, ಹುಂಚದಕಟ್ಟೆ, ಎಚ್ಡಿ ಕೋಟೆ, ಟಿಜಿ ಹಳ್ಳಿಯಲ್ಲಿ ಮಳೆಯಾಗಿದೆ.

ಉತ್ತರ-ಮಧ್ಯ ಮಹಾರಾಷ್ಟ್ರದಿಂದ ಉತ್ತರ ತಮಿಳುನಾಡಿಗೆ ಉತ್ತರ-ದಕ್ಷಿಣ ತೊಟ್ಟಿ ಮರಾಠಾವಾಡದಿಂದ ದಕ್ಷಿಣ ತಮಿಳುನಾಡಿನವರೆಗೆ ಕರ್ನಾಟಕದ ಒಳನಾಡಿನ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ ಎಂದು ಕರ್ನಾಟಕದ ಸಂಕ್ಷಿಪ್ತ ಲಕ್ಷಣಗಳು ಸೂಚಿಸುತ್ತವೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ ಇದೆ ಎಂದು ಐಎಂಡಿ ಹವಾಮಾನ ಕೇಂದ್ರದ ಪ್ರಕಾರ ತಿಳಿದು ಬಂದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಹಾಗೂ ಗುಡುಗು ಸಹಿತ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕಳೆದ ವಾರ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ಬಿಸಿಲಿನಿಂದ ರೋಗಿ ಹೋಗಿದ್ದ ಜನ ಸಂತಸ ವ್ಯಕ್ತಪಡಿಸಿದ್ದರು. ಅಲ್ಲದೇ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮಳೆಯಾಗುದ ಸಾಧ್ಯತೆ ಇದೆ. ಇನ್ನೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾದ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+