ಕರ್ನಾಟಕದೆಲ್ಲೆಡೆ ಮೋಡಕವಿದ ವಾತಾವರಣ, ಮಳೆಯ ಮುನ್ಸೂಚನೆ
ಬೆಂಗಳೂರು, ನವೆಂಬರ್ 27: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಳೆಯಾಗಲಿದ್ದು, ಉಳಿದಂತೆ ಎಲ್ಲಾ ಕಡೆ ಒಣಹವೆ ಮುಂದುವರೆಯಲಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಬೀದರ್‌ನಲ್ಲಿ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಕಾರಣ ಅದು ಕರ್ನಾಟಕದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ ಭಾಗ, ಪಂಜಾಬ್, ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ರಾಜಸ್ತಾನ, ಹರ್ಯಾಣ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ಗರಿಷ್ಠ 29.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮಯನ್ಮಾರ್‌ನಲ್ಲಿ ಭೂಕಂಪ
ಮಯನ್ಮಾರ್‌ನಲ್ಲಿಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ. ಮಯನ್ಮಾರ್ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಮಳೆಯಾಗುವ ಮುನ್ಸೂಚನೆಯೂ ದೊರೆತಿದೆ. ವಾಯುವ್ಯ ಮಯಾನ್ಮಾರ್ ಭಾಗದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಪರಿಣಾಮ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕೆಲ ಭಾಗಗಳು ನಡುಗಿವೆ.

ವಾರಾಂತ್ಯದಲ್ಲಿ ಚೆನ್ನೈನಲ್ಲಿ ಭಾರಿ ಮಳೆ
ವಾರಾಂತ್ಯದಲ್ಲಿ ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ, ಡಿಸೆಂಬರ್ ಮೊದಲ ವಾರದಿಂದ ಹಿಂಗಾರು ಆರಂಭವಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನವೆಂಬರ್ 28ರಿಂದ ಡಿಸೆಂಬರ್ 2ವರೆಗೂ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗುವ ಮುನ್ಸೂಚನೆ
ಕಂಚೀಪುರಂ, ಪುದುಚೆರಿ, ಕರೈಕಲ್, ನಾಗಪಟ್ಟಣಂ, ಪಂಬನ್, ತಾಂಜಾವೂರ್, ಮಧುರೈ, ನಾಗಪಟ್ಟಣಂನಲ್ಲಿ ಮಳೆಯಾಗಲಿದೆ. ಅದನ್ನು ಹೊರತುಪಡಿಸಿ ಕರ್ನಾಟಕದಾದ್ಯಂತ ಕೂಡ ಮಳೆಯಾಗಲಿದೆ.












Click it and Unblock the Notifications