ಇನ್ನು ಎರಡು ದಿನ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ
ಬೆಂಗಳೂರು, ಜನವರಿ 15: ಮುಂದಿನ ಎರಡು ದಿನ ಕರ್ನಾಟಕದಲ್ಲಿ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರದಲ್ಲಿ ಜನವರಿ 17ರವರೆಗೆ ಮಳೆಯಾಗಲಿದೆ.
ಬೆಂಗಳೂರಲ್ಲಿ ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳ ಕಾಲ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ.

ದೆಹಲಿ, ರಾಜಸ್ಥಾನ,ಹರ್ಯಾಣ,ಉತ್ತರಾಖಂಡ,ಚಂಡೀಗಢ, ಉತ್ತರ ಪ್ರದೇಶಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂದಿನ ಐದಾರು ದಿನಗಳ ಕಾಲ ಬೆಳಗ್ಗೆ ಮಂಜು ಇರಲಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನದಿಗಳು ಸಂಪೂರ್ಣವಾಗಿ ಹೆಪ್ಪುಗಟ್ಟಿವೆ.ಅಸ್ಸಾಂನಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ, ಶುಕ್ರವಾರದ ಬಳಿಕ ಅರುಣಾಚಲಪ್ರದೇಶದಲ್ಲೂ ಮಳೆಯಾಗಲಿದೆ.












Click it and Unblock the Notifications